ಭಾರತದಲ್ಲಿ 35 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜುಲೈ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ದೇಶಾದ್ಯಂತ 46,04,925 ಸೆಷನ್‌ಗಳ ಮೂಲಕ ಒಟ್ಟು 35,12,21,306 ಮಂದಿಗೆ ಕೊವಿಡ್-19 ಲಸಿಕೆ ವಿತರಣೆ ಮಾಡಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಕಳೆದ ಒಂದು ದಿನದಲ್ಲಿ 63,87,849 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಎಷ್ಟು ಜನರಿಗೆ ಲಸಿಕೆ ವಿತರಣೆ?:
ಭಾರತದಲ್ಲಿ ಮೇ 1ರಿಂದ 18-44 ವರ್ಷದವರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಆರಂಭಿಸಲಾಗಿದ್ದು, ಈವರೆಗೂ 9,98,28,219 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 27,26,338 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.
1,02,27,957 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 73,08,968 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,75,81,755 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 96,55,149 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 9,05,89,022 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,86,76,107 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,89,10,208 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,57,17,583 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ:
ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43,071 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 52,299 ಸೋಂಕಿತರು ಗುಣಮುಖರಾಗಿದ್ದರೆ, 955 ಜನರು ಪ್ರಾಣ ಬಿಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,05,45,433ಕ್ಕೆ ಏರಿಕೆಯಾಗಿದ್ದು, 2,96,58,078 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೂ 4,02,005 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, 4,85,350 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications