ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 89,73 ಲಕ್ಷ ಕೊರೊನಾವೈರಸ್ ಸೋಂಕಿತರು ಗುಣಮುಖ

|
Google Oneindia Kannada News

ನವದೆಹಲಿ, ಡಿಸೆಂಬರ್.03: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ದೇಶದಲ್ಲಿ ಒಂದೇ ದಿನ 35551 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 526 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆಯು 1,38,648ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕಹಿಸುದ್ದಿ: ಕರ್ನಾಟಕದಲ್ಲಿ ಇನ್ಮುಂದೆ ಪ್ರತಿನಿತ್ಯ 10000 ಮಂದಿಗೆ ಕೊರೊನಾವೈರಸ್!ಕಹಿಸುದ್ದಿ: ಕರ್ನಾಟಕದಲ್ಲಿ ಇನ್ಮುಂದೆ ಪ್ರತಿನಿತ್ಯ 10000 ಮಂದಿಗೆ ಕೊರೊನಾವೈರಸ್!

ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದರೆ ಗುಣಮುಖ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 40,726 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 89,73,373 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 4,22,943 ಸಕ್ರಿಯ ಪ್ರಕರಣಗಳಿವೆ.

35551 New Covid-19 Cases And 526 Deaths Reported In India In The Last 24 Hours

11,11,698 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,11,698 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 14,35,57,647 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

Recommended Video

Burevi ಚಂಡಮಾರುತ ಕೇರಳ ಪ್ರವೇಶಿಸಿದ್ದಕ್ಕೆ , ನಮ್ಮ ರಾಜ್ಯದಲ್ಲಿ ಮಳೆ | Oneindia Kannada

ವಿಶ್ವದಲ್ಲಿ 6,48,39,674 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,99,218 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,49,37,554 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

English summary
35551 New Covid-19 Cases And 526 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X