ಕೊರೊನಾ 2ನೇ ಅಲೆ: ಭಾರತದಲ್ಲಿ ಒಂದೇ ದಿನ 35871 ಹೊಸ ಪ್ರಕರಣ

ನವದೆಹಲಿ, ಮಾರ್ಚ್ 18: ಭಾರತದಲ್ಲಿ ಮೂರು ತಿಂಗಳಿನಿಂದ ನಿಯಂತ್ರಣದಲ್ಲಿದ್ದ ಕೊರೊನಾವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಇತ್ತೀಚಿಗೆ 20 ಸಾವಿರದ ಗಡಿ ದಾಟುತ್ತಿದ್ದ ಕೊವಿಡ್-19 ಸಂಖ್ಯೆಯು ಇದೀಗ ಹೊಸ ದಾಖಲೆ ಬರೆದಿದೆ.

ಒಂದೇ ದಿನ 35871 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,14,74,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 172 ಜನರು ಬಲಿಯಾಗಿದ್ದು, ಈವರೆಗೂ 1,59,216 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 17,741 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಇಲ್ಲಿಯತನಕ 1,10,63,025 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 2,52,364 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

35871 New Coronavirus Cases Reported in India in the Last 24 Hours

ಕೊರೊನಾವೈರಸ್ ಸೋಂಕಿಗೆ ಲಸಿಕೆ:

ದೇಶದಲ್ಲಿ ಈವರೆಗೂ 3,71,43,255 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ವಿಶ್ವದಲ್ಲಿ ಒಂದೇ ದಿನ ಒಟ್ಟು 5,27,664 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,18,02,787ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9647 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,91,747ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,81,98,310 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,09,12,730 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+