• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ

|

ನವದೆಹಲಿ, ಅಕ್ಟೋಬರ್.27: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 50 ಸಾವಿರದ ಗಡಿ ದಾಟುತ್ತಿದ್ದ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 36,469 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 79,46,429ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಆಕ್ಸ್‌ಫರ್ಡ್ ವಿವಿಯ ಕೋವಿಡ್ ಲಸಿಕೆ; ಹೊಸ ಸಂಗತಿ ಬಹಿರಂಗ

ಕೊರವವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದೆ. ಕಳೆದ ಎರಡು ದಿನಗಳಿಂದ ಸಾವಿನ ಸಂಖ್ಯೆಯು 500 ಮಿತಿಯಲ್ಲಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 488 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,19,502ಕ್ಕೆ ಏರಿಕೆಯಾಗಿದೆ.

ಕೊವಿಡ್-19 ಸೋಂಕಿತರಿಗಿಂತ ಗುಣಮುಖರು ಡಬಲ್

ಕೊವಿಡ್-19 ಸೋಂಕಿತರಿಗಿಂತ ಗುಣಮುಖರು ಡಬಲ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರ ಸಂಖ್ಯೆ ಡಬಲ್ ಆಗಿದೆ. ಒಂದು ದಿನದಲ್ಲಿ 36469 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದರೆ, ಅದೇ ದಿನ 63842 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೂ 72,01,070 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಭಾರತದಲ್ಲಿ ಕೇವಲ 6.25 ಸಕ್ರಿಯ ಪ್ರಕರಣ

ಭಾರತದಲ್ಲಿ ಕೇವಲ 6.25 ಸಕ್ರಿಯ ಪ್ರಕರಣ

ಕೊರೊನಾವೈರಸ್ ಸೋಂಕಿತರಲ್ಲಿ ಶೇ.90ರಷ್ಟು ಜನರು ಗುಣಮುಖರಾಗುತ್ತಿರುವುದನ್ನು ಇತ್ತೀಚಿಗಷ್ಟೇ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಸ್ಪಷ್ಟಪಡಿಸಿತ್ತು. 100 ಮಂದಿ ಸೋಂಕಿತರಲ್ಲಿ 90 ಸೋಂಕಿತರು ಗುಣಮುಖರಾಗಿದ್ದಾರೆ. 10 ಜನರಷ್ಟೇ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿತ್ತು. ಅದರಂತೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಒಟ್ಟಾಗಿ 80 ಲಕ್ಷ ಪ್ರಕರಣಗಳ ಸನ್ನಿಹಿತದಲ್ಲಿ ಕೊವಿಡ್-19 ಪ್ರಕರಣಗಳು ದಾಖಲಾಗಿದ್ದರೂ ದೇಶದಲ್ಲಿ ಕೇವಲ 6.25 ಲಕ್ಷ ಸಕ್ರಿಯ ಪ್ರಕರಣಗಳಿರುವುದು ದೃಢಪಟ್ಟಿದೆ.

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಕಡಿಮೆಯಾಗಿಲ್ಲ

ಕೊರೊನಾವೈರಸ್ ಸೋಂಕಿನ ಪರೀಕ್ಷೆ ಕಡಿಮೆಯಾಗಿಲ್ಲ

ಕೊರೊನಾವೈರಸ್ ಸೋಂಕಿನ ಪರೀಕ್ಷೆಯನ್ನು ಕಡಿಮೆಗೊಳಿಸಿದ್ದರಿಂದ ಪ್ರಕರಣಗಳು ಇಳಿಮುಖವಾಗಿದೆ ಎನ್ನುವಂತೆಯೂ ಇಲ್ಲ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 9,58,116 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 10,44,20,894 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 43776587ರ ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 11,64,515ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 32179748 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

   ಕಾಂಗ್ರೆಸ್ ನಲ್ಲಿ ಗೊಂದಲ ! | DK Shivkumar | RR Nagar By Election | Oneindia Kannada

   English summary
   36469 New Covid-19 Cases And 488 Deaths Reported In India In The Last 24 Hours.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X