• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸಿಹಿಸುದ್ದಿ: ಭಾರತದಲ್ಲಿ 90,16,289 ಕೊರೊನಾ ಸೋಂಕಿತರು ಗುಣಮುಖ

|

ನವದೆಹಲಿ, ಡಿಸೆಂಬರ್.04: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ 40 ಸಾವಿರಕ್ಕಿಂತ ಕಡಿಮೆಯಾಗಿದೆ. ಕಳೆದೊಂದು ದಿನದಲ್ಲಿ 36594 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆಯು 1,39,188ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅಮೆರಿಕದಲ್ಲಿ ಒಂದೇ ದಿನ ಬರೋಬ್ಬರಿ 2800 ಮಂದಿ ಕೊರೊನಾ ಸೋಂಕಿಗೆ ಬಲಿ

ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದರೆ ಗುಣಮುಖ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 95,71,559ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಒಂದೇ ದಿನದಲ್ಲಿ 40,726 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೂ 90,16,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, 4,16,082 ಸಕ್ರಿಯ ಪ್ರಕರಣಗಳಿವೆ.

11,70,102 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,70,102 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 14,47,27,749 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದಲ್ಲಿ 6,55,28,133 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 15,11,726 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,53,71,073 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

English summary
36594 New Covid-19 Cases And 540 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X