ಭಾರತದಲ್ಲಿ ಒಂದೇ ದಿನ 36604 ಮಂದಿಗೆ ಕೊರೊನಾವೈರಸ್ ಪಾಸಿಟಿವ್
ನವದೆಹಲಿ, ಡಿಸೆಂಬರ್.02: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ದೇಶದಲ್ಲಿ ಒಂದೇ ದಿನ 36604 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 94,99,414ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 501 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆಯು 1,381,22ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದರೆ ಗುಣಮುಖ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನದಲ್ಲಿ 43,062 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 89,32,647 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 4,28,644 ಸಕ್ರಿಯ ಪ್ರಕರಣಗಳಿವೆ.

10,96,651 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,96,651 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 14,24,45,949 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದಲ್ಲಿ 6,41,94,674 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,86,829 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,44,41,249 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.












Click it and Unblock the Notifications