ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಲಸಿಕೆ ಪಡೆದವರ ಲೆಕ್ಕ

ನವದೆಹಲಿ, ಮೇ10: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತಕ್ಕೆ ಭಾರತವೇ ತತ್ತರಿಸಿ ಹೋಗಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆಯುತ್ತಿದೆ.

ದೇಶದಲ್ಲಿ ಒಂದೇ ದಿನ 3,66,161 ಮಂದಿಗೆ ಕೊರೊನಾವೈರಸ್ ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 3,53,818 ಸೋಂಕಿತರು ಗುಣಮುಖರಾಗಿದ್ದರೆ, 3,754 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 2,26,62,575 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 2,26,62,575 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 2,46,116 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 37,45,237 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

366161 New Coronavirus Cases Reported in India in the Last 24 Hours
ದೇಶದಲ್ಲಿ 17 ಕೋಟಿಗೂ ಅಧಿಕ ಮಂದಿಗೆ ಲಸಿಕೆ:

ಭಾರತದಲ್ಲಿ ಈವರೆಗೂ 17,01,53,432 ಕೋಟಿ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಈ ಪೈಕಿ 95,46,871 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 64,71,090 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,39,71,341 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 77,54,283 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,51,74,561 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 65,55,714 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,36,72,259 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,49,77,918 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+