ಅರುಣಾಚಲ ಪ್ರದೇಶ ಈಗ ಕೊರೊನಾ ವೈರಸ್ ಮುಕ್ತವಲ್ಲ

ಇಟಾನಗರ, ಜೂನ್ 04 : ಅರುಣಾಚಲ ಪ್ರದೇಶ ರಾಜ್ಯವನ್ನು ಏಪ್ರಿಲ್ ತಿಂಗಳಿನಲ್ಲಿ ಕೊರೊನಾ ವೈರಸ್ ಸೋಂಕು ಮುಕ್ತ ಎಂದು ಘೋಷಣೆ ಮಾಡಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಕೋವಿಡ್ - 19 ಸಕ್ರಿಯ ಪ್ರಕರಣಗಳ ಸಂಖ್ಯೆ 36.

ಅರುಣಾಚಲ ಪ್ರದೇಶ ರಾಜ್ಯದಲ್ಲಿ ಪ್ರಸ್ತುತ ಕೊರೊನಾ ವೈರಸ್ ಸೋಂಕಿನ ಸಂಖ್ಯೆ 37. ಇದರಲ್ಲಿ ಚಂಗ್ಲಾಂಗ್ ಜಿಲ್ಲೆಯೊಂದರಲ್ಲಿಯೇ 25 ಪ್ರಕರಣಗಳಿವೆ. ಆದ್ದರಿಂದ ರಾಜ್ಯ ಕೊರೊನಾ ವೈರಸ್ ಸೋಂಕಿನಿಂದ ಮುಕ್ತವಾಗಿಲ್ಲ.

ಮೊದಲು ರಾಜ್ಯದಲ್ಲಿ ಒಂದು ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿತ್ತು. ಆ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಏಪ್ರಿಲ್ 16ರಂದು ರಾಜ್ಯ ಕೊರೊನಾ ಮುಕ್ತ ಎಂದು ಘೋಷಣೆ ಮಾಡಲಾಗಿತ್ತು.

37 COVID 19 Cases In Arunachal Pradesh Its Not Coronavirus Free State Now

ಕೇಂದ್ರ ಸರ್ಕಾರ ಅಂತರರಾಜ್ಯಗಳ ನಡುವೆ ಸಂಚಾರಕ್ಕೆ ಒಪ್ಪಿಗೆ ನೀಡಿದ ಬಳಿಕ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಯಿತು. ಇದರಿಂದಾಗಿ ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿದೆ.

ಅರುಣಾಚಲ ಪ್ರದೇಶ ರಾಜ್ಯದಲ್ಲಿ ಕಳೆದ 11 ದಿನಗಳಲ್ಲಿ 37 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಆದ್ದರಿಂದ ರಾಜ್ಯ ಕೊರೊನಾ ವೈರಸ್ ಮುಕ್ತ ಎಂಬ ಹಣೆಪಟ್ಟಿ ಕಳಚಿಕೊಂಡಿದೆ.

ಕರ್ನಾಟಕದ ಪಕ್ಕದ ಗೋವಾ ರಾಜ್ಯದಲ್ಲಿಯೂ ಹೀಗೆಯೇ ಆಗಿತ್ತು. ಏಪ್ರಿಲ್‌ನಲ್ಲಿ ರಾಜ್ಯ ಕೊರೊನಾ ವೈರಸ್ ಸೋಂಕು ಮುಕ್ತವಾಗಿತ್ತು. ಮೇ ಅಂತ್ಯದ ವೇಳೆಗೆ ದೆಹಲಿಯಿಂದ ಬಂದ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+