ಮಳೆಯ ಅಬ್ಬರಕ್ಕೆ 37 ಸಾವು, ಹಿಮಾಚಲದಲ್ಲಿ ಇಂದು ಪ್ರವಾಹದ ಎಚ್ಚರಿಕೆ, ಉತ್ತರಾಖಂಡ್ ಅಲರ್ಟ್!

ಉತ್ತರ ಭಾರತದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ಕಳೆದ ಎರಡು ದಿನಗಳಲ್ಲಿ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಘಟನೆಗಳಿಂದಾಗಿ 37 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶ ಮಳೆಗೆ ಹೆಚ್ಚು ಹಾನಿಗೊಳಗಾಗಿದೆ. ಅಲ್ಲಿ ಕಳೆದ ಎರಡು ದಿನಗಳಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತಗಳಿಂದಾಗಿ 18 ಜನರು ಸಾವನ್ನಪ್ಪಿದ್ದಾರೆ. ಪಂಜಾಬ್ ಮತ್ತು ಹರಿಯಾಣದಲ್ಲಿ ಒಂಬತ್ತು ಜನರು, ರಾಜಸ್ಥಾನದಲ್ಲಿ ಏಳು ಮತ್ತು ಉತ್ತರ ಪ್ರದೇಶದಲ್ಲಿ ಮೂವರು ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ದೆಹಲಿಯ ಯಮುನಾ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಪ್ರದೇಶದಾದ್ಯಂತ ನಗರಗಳು ಮತ್ತು ಪಟ್ಟಣಗಳಲ್ಲಿ ಅನೇಕ ರಸ್ತೆಗಳು ಮತ್ತು ವಸತಿ ಪ್ರದೇಶಗಳು ಮೊಣಕಾಲು ಆಳದ ನೀರಿನಲ್ಲಿ ಮುಳುಗಿವೆ.

37 dead due to rain, flood warning in Himachal today, Uttarakhand alert!

ಭಾರೀ ಮಳೆ ಮತ್ತು ಪ್ರವಾಹವನ್ನು ನಿಭಾಯಿಸಲು ಒಟ್ಟು 39 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ನಿಯೋಜಿಸಲಾಗಿದೆ. ಪಂಜಾಬ್‌ನಲ್ಲಿ 14 ತಂಡಗಳು ಕಾರ್ಯನಿರ್ವಹಿಸುತ್ತಿದ್ದರೆ, ಹಿಮಾಚಲ ಪ್ರದೇಶದಲ್ಲಿ ಒಂದು ಡಜನ್, ಉತ್ತರಾಖಂಡದಲ್ಲಿ ಎಂಟು ಮತ್ತು ಹರಿಯಾಣದಲ್ಲಿ ಐದು ತಂಡಗಳನ್ನು ನಿಯೋಜಿಸಲಾಗಿದೆ.

ಇನ್ನೂ ಜಮ್ಮುವಿನಲ್ಲಿ, 7,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ವಿಶೇಷವಾಗಿ ಭಗವತಿನಗರ ಮೂಲ ಶಿಬಿರದಲ್ಲಿ ಸಿಲುಕಿಕೊಂಡಿದ್ದಾರೆ. ಜೊತೆಗೆ 5,000 ಕ್ಕೂ ಹೆಚ್ಚು ಜನರು ರಾಂಬನ್ ಜಿಲ್ಲೆಯ ಚಂದರ್‌ಕೋಟ್ ಮೂಲ ಶಿಬಿರದಲ್ಲಿ ಸಿಲುಕಿಕೊಂಡಿದ್ದಾರೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ಮಂಗಳವಾರ ಯಾವುದೇ ಬ್ಯಾಚ್ ಯಾತ್ರಿಗಳು ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಲಾಗಿಲ್ಲ. ಇದರಿಂದ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್

ಅಧಿಕಾರಿಗಳ ಪ್ರಕಾರ, ಸೋಮವಾರ 300 ಕ್ಕೂ ಹೆಚ್ಚು ಪ್ರವಾಸಿಗರು ಮತ್ತು ಸ್ಥಳೀಯ ಜನರು ಚಂದ್ರತಾಲ್, ಪಾಗಲ್ ನಲ್ಲಾ ಮತ್ತು ಲಾಹೌಲ್ ಮತ್ತು ಸ್ಪಿತಿಯ ಇತರ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಎಫ್‌ಆರ್) ತಂಡಗಳು (ಎನ್‌ಡಿಎಫ್‌ಆರ್), ಪೊಲೀಸರು ಮತ್ತು ಗೃಹ ರಕ್ಷಕರು 515 ಕಾರ್ಮಿಕರನ್ನು ಜಲಾವೃತ ಕೊಳೆಗೇರಿಯಿಂದ ರಕ್ಷಿಸಿದ್ದಾರೆ.

ಸಿಲುಕಿರುವ 300 ಜನರನ್ನು ರಕ್ಷಿಸಲು ಪ್ರಯತ್ನಗಳು ನಡೆಯುತ್ತಿವೆ ಮತ್ತು ಹವಾಮಾನ ಸ್ಪಷ್ಟವಾಗುತ್ತಿದ್ದಂತೆ ಅವರನ್ನು ವಿಮಾನದ ಮೂಲಕ ಹೊರತರಬಹುದು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಮಾತ್ರವಲ್ಲದೆ ಮಳೆ ಗಾಳಿಯಿಂದಾಗಿ ಹಲವು ಪ್ರದೇಶಗಳಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆ ಸ್ಥಗಿತಗೊಂಡಿದೆ.

ಹಿಮಾಚಲದಲ್ಲಿ 800 ರಸ್ತೆಗಳು ಬಂದ್

ರಾಜ್ಯದಲ್ಲಿ ಇನ್ನೂ ಸುಮಾರು 800 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಸಾರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ, ಹಿಮಾಚಲ ರಸ್ತೆ ಸಾರಿಗೆ ನಿಗಮದ (ಎಚ್‌ಆರ್‌ಟಿಸಿ) 1,255 ಮಾರ್ಗಗಳಲ್ಲಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು 576 ಬಸ್‌ಗಳು ಮಾರ್ಗದಲ್ಲಿ ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿವೆ.

ಅನೇಕ ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಶಿಮ್ಲಾ-ಕಿನ್ನೌರ್ ರಸ್ತೆಯಲ್ಲೂ ಕಲ್ಲುಬಂಡೆಗಳು ಜಾರಿದ್ದರಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಹವಾಮಾನ ಇಲಾಖೆಯು ರಾಜ್ಯದ 12 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಲ್ಲಿ ಅತಿ ಹೆಚ್ಚು (204 ಮಿ.ಮೀ.ಗಿಂತ ಹೆಚ್ಚು) ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಿದೆ. ಜುಲೈ 11ರಂದು ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ ಮತ್ತು ಹಠಾತ್ ಪ್ರವಾಹದ ಎಚ್ಚರಿಕೆಯನ್ನು ನೀಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ರೈಲು ಸಂಚಾರ ಸ್ಥಗಿತ

ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಶಿಮ್ಲಾ-ಕಲ್ಕಾ ಮಾರ್ಗದ ರೈಲು ಕಾರ್ಯಾಚರಣೆಯನ್ನು ಮಂಗಳವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸೋಮವಾರ ಮತ್ತು ಮಂಗಳವಾರ ಮುಚ್ಚಲು ಆದೇಶಿಸಲಾಗಿದೆ.

ಸೋಮವಾರ ಉನಾದಲ್ಲಿ 175 ಮಿಮೀ, ಸೋಲನ್ 170 ಮಿಮೀ, ದಾಧೌ 160 ಮಿಮೀ, ಸಂಗ್ರಹಾ 150 ಮಿಮೀ, ರಾಂಪುರ 145 ಮಿಮೀ, ಶಿಮ್ಲಾ 139, ನರಕಂದ 132 ಮಿಮೀ, ಸುಜಾನ್‌ಪುರ ತಿರಾ ಮತ್ತು ಕಸೌಲಿ 130 ಮಿಮೀ ಮಳೆಯಾಗಿದೆ.

ಉತ್ತರಖಂಡದಲ್ಲಿ ಮಳೆ ಅಬ್ಬರ

ಉತ್ತರಾಖಂಡದಲ್ಲಿ, ಸೋಮವಾರ ನಿರಂತರ ಮಳೆ ಮತ್ತು ಭೂಕುಸಿತದಿಂದಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಹಲವಾರು ರಸ್ತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲವು ಗಂಟೆಗಳ ನಂತರ ಹೆದ್ದಾರಿಯಲ್ಲಿ ಸಂಚಾರವನ್ನು ಪುನಃಸ್ಥಾಪಿಸಲಾಯಿತು. ಇನ್ನೂ ಮುಚ್ಚಿರುವ ಇತರ ರಸ್ತೆಗಳನ್ನು ತೆರೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಾಗರೂಕರಾಗಿರಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ.

ರಾಜಸ್ಥಾನದಲ್ಲಿ ತೀವ್ರ ಮಾನ್ಸೂನ್ ಮಳೆವಾಗಿದೆ. ರಾಜ್ಯದ ರಾಜಧಾನಿ ಜೈಪುರದ ಮುರಳಿಪುರ ಪ್ರದೇಶದಲ್ಲಿ ತುಂಬಿ ಹರಿಯುತ್ತಿರುವ ಚರಂಡಿಯ ನೀರಿನ ರಭಸಕ್ಕೆ ಏಳು ವರ್ಷದ ಬಾಲಕ ಸೋಮವಾರ ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅಜ್ಮೀರ್‌ನಲ್ಲಿ ಮೂರು, ನಾಗೌರ್‌ನಲ್ಲಿ ಇಬ್ಬರು ಮತ್ತು ಟೋಂಕ್‌ನಿಂದ ಒಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+