ಭಾರತದಲ್ಲಿ 3 ಕೋಟಿ ಕೊರೊನಾವೈರಸ್ ಸೋಂಕಿತರು ಗುಣಮುಖ

ನವದೆಹಲಿ, ಜುಲೈ 12: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ತಗ್ಗಿದೆ. ಕೊವಿಡ್-19 ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, ಚೇತರಿಕೆ ಪ್ರಮಾಣ ಶೇ.97.22ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 37,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 39,649 ಸೋಂಕಿತರು ಗುಣಮುಖರಾಗಿದ್ದು, 724 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 3,08,74,376 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,00,14,713 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,08,764 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,50,899 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 37,154 New Coronavirus Cases Reported in India in the Last 24 Hours

ದೇಶದಲ್ಲಿ 37.73 ಕೋಟಿ ಜನರಿಗೆ ಲಸಿಕೆ:

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 12,35,287 ಜನರಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ ಈವರೆಗೂ 37,73,52,501 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+