ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಈವರೆಗೆ 86 ಲಕ್ಷ ಕೊವಿಡ್-19 ಸೋಂಕಿತರು ಗುಣಮುಖ

|
Google Oneindia Kannada News

ನವದೆಹಲಿ, ನವೆಂಬರ್.24: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ. ದೇಶದಲ್ಲಿ ಒಂದೇ ದಿನ 37975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 42314 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 480 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಸಿಹಿಸುದ್ದಿ: ಕೊವಿಡ್-19 ಸೋಂಕಿಗೆ ಸಿಹಿಸುದ್ದಿ: ಕೊವಿಡ್-19 ಸೋಂಕಿಗೆ "Cheap And Best" ಲಸಿಕೆ!

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,34,218 ಮಂದಿ ಪ್ರಾಣ ಬಿಟ್ಟಿದ್ದಾರೆ. 86,04,955 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 4,38,667 ಸಕ್ರಿಯ ಪ್ರಕರಣಗಳಿವೆ.

37975 New Covid-19 Cases And 480 Deaths Reported In India In The Last 24 Hours


ಜಗತ್ತಿನಲ್ಲಿ ಕೊರೊನಾವೈರಸ್ ಪ್ರಕರಣ:

ವಿಶ್ವದಲ್ಲಿ 5,94,87,127 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,01,490 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,11,37,233 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

Recommended Video

Samsung ಭಾರತದಲ್ಲಿ ನೂತನವಾಗಿ 5 ಸಾವಿರ ಕೋಟಿ ಹೂಡಿಕೆ | Oneindia Kannada

English summary
37975 New Covid-19 Cases And 480 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X