Breaking; ಭಾರತದಲ್ಲಿ 3805 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಮೇ 07; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರದ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ ದೇಶದಲ್ಲಿ 3805 ಹೊಸ ಪ್ರಕರಣಗಳು ದಾಖಲಾಗಿವೆ. 3,168 ಜನರು ಗುಣಮುಖಗೊಂಡಿದ್ದಾರೆ.
24 ಗಂಟೆಯಲ್ಲಿ ದೇಶದಲ್ಲಿ 22 ಜನರು ಮೃತಪಟ್ಟಿದ್ದಾರೆ. 3805 ಹೊಸ ಕೋವಿಡ್ ಪ್ರಕರಣಗಳ ಪೈಕಿ ನವದೆಹಲಿಯಲ್ಲಿ ಶುಕ್ರವಾರ 1,656 ಹೊಸ ಪ್ರಕರಣಗಳು ದಾಖಲಾಗಿವೆ.

ದೇಶದ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 20,303 ಆಗಿದೆ. ಇದುವರೆಗೂ 42554416 ಜನರು ಗುಣಮುಖಗೊಂಡಿದ್ದಾರೆ. 524024 ಜನರು ಮೃತಪಟ್ಟಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.
ಶುಕ್ರವಾರ ಮಹಾರಾಷ್ಟ್ರದ ಥಾಣೆಯಲ್ಲಿ 29 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಮುಂಬೈನಲ್ಲಿ 117 ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ದಾಖಲಾದ ಹೊಸ ಪ್ರಕರಣಗಳು 205 ಆಗಿದೆ.
ಪಶ್ಚಿಮ ಬಂಗಾಳದಲ್ಲಿ 48, ಕರ್ನಾಟಕದಲ್ಲಿ 181 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದ ಸಕ್ರಿಯ ಪ್ರಕರಣಗಳು 1895.
ದೆಹಲಿಯಲ್ಲಿ 1656 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಸೋಂಕಿತರು ಸಹ ಮೃತಪಟ್ಟಿಲ್ಲ. ರಾಜ್ಯದ ಪಾಸಿಟಿವಿಟಿ ದರ ಶೇ 5.39 ಆಗಿದೆ.
ಗುರುವಾರ ದೆಹಲಿಯಲ್ಲಿ 1365 ಹೊಸ ಪ್ರಕರಣ ದಾಖಲಾಗಿತ್ತು. ಬುಧವಾರ 1354, ಮಂಗಳವಾರ 1414 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು.











Click it and Unblock the Notifications