ಭಾರತದಲ್ಲಿ ಒಂದೇ ದಿನ 38,164 ಮಂದಿಗೆ ಕೊರೊನಾವೈರಸ್
ನವದೆಹಲಿ, ಜುಲೈ 19: ಕೊರೊನಾವೈರಸ್ ಡೆಲ್ಟಾ ರೂಪಾಂತರದಿಂದ ಎರಡನೇ ಅಲೆ ಹಾಗೂ ಡೆಲ್ಟಾ ಪ್ಲಸ್ ರೂಪಾಂತರದಿದ ಮೂರನೇ ಅಲೆ ಅಪಾಯ ಹೆಚ್ಚಾಗಿದೆ. ಜುಲೈ 4ರಿಂದಲೇ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಶುರುವಾಗಿದೆ ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,164 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 499 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 38,660 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ಕಂಡು ಬರುತ್ತಿದೆ ಈ ಆರೋಗ್ಯ ಸಮಸ್ಯೆ
ಭಾರತದಲ್ಲಿ ಒಟ್ಟು 3,11,44,229 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,03,08,456 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,14,108 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,21,665 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

14 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ:
ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 14,63,593 ದೇಶದಲ್ಲಿ ಈವರೆಗೂ 44,54,22,256 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ:
ಭಾರತದಲ್ಲಿ ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 40,64,81,493 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.












Click it and Unblock the Notifications