ಭಾರತದಲ್ಲಿ 24 ಗಂಟೆಗಳಲ್ಲಿ 38310 ಮಂದಿಗೆ ಕೊವಿಡ್-19 ಪಾಸಿಟಿವ್
ನವದೆಹಲಿ, ನವೆಂಬರ್.03: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿನಿತ್ಯ 50 ಸಾವಿರದ ಗಡಿ ದಾಟುತ್ತಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆಯು 38310ಕ್ಕೆ ಸೀಮಿತಗೊಂಡಿದೆ. ಕಳೆದ 24 ಗಂಟೆಗಳಲ್ಲಿ 38310 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 58,323 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 490 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 82,67,623ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,23,097 ಮಂದಿ ಪ್ರಾಣ ಬಿಟ್ಟಿದ್ದಾರೆ. 76,03,121 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 5,41,405 ಸಕ್ರಿಯ ಪ್ರಕರಣಗಳಿವೆ.

10,46,247 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,46,247 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 11,17,89,350 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 47319160 ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 12,11,268ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 34033770 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.












Click it and Unblock the Notifications