ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಕೊಂಚ ಏರಿಕೆ
ನವದೆಹಲಿ, ನವೆಂಬರ್ 18: ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆಯಾಗಿದೆ.
ಮಂಗಳವಾರ 29,164 ಪ್ರಕರಣಗಳು ಪತ್ತೆಯಾಗಿದ್ದವು, ಇಂದು 38,617 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಬೇರೆ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ದೆಹಲಿಯಲ್ಲಿ ಮಾತ್ರ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಉಳಿದೆಲ್ಲಾ ಕಡೆ ಕಡಿಮೆಯಾಗುತ್ತಿದೆ.
ಒಂದೇ ದಿನದಲ್ಲಿ 474 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 1,30,993 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು 89,12,908 ಕೊರೊನಾ ಸೋಂಕಿತರಿದ್ದಾರೆ. 4,46,805 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 83,35,110 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನದಲ್ಲಿ 44,739 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.
ದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವು ಪ್ರಮುಖ ಮಾರುಕಟ್ಟೆಗಳನ್ನು ಬಂದ್ ಮಾಡಲು ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.












Click it and Unblock the Notifications