ಕೊರೊನಾವೈರಸ್ ಕಥೆ: ಓದಿ ತಿಳಿಯಿರಿ ಸಂಪೂರ್ಣ ಅಂಕಿ-ಸಂಖ್ಯೆ

ನವದೆಹಲಿ, ಜುಲೈ 14: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 38,792 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 624 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 41,000 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು 3,09,46,074 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,01,04,720 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,11,408 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,29,946 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಒಂದು ಕಾರಣವಿದೆ. ದೇಶದ ಮೊದಲಿನಂತೆ ಪ್ರತಿನಿತ್ಯ ಕನಿಷ್ಠ 19 ಲಕ್ಷ ಜನರಿಗೆ ತಪಾಸಣೆ ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,15,501 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 43,59,73,639 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 38.76 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ 38.76 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 179 ದಿನಗಳೇ ಕಳೆದಿವೆ. ಕಳೆದ 24 ಗಂಟೆಗಳಲ್ಲಿ 37,14,441 ಜನರಿಗೆ ಲಸಿಕೆ ನೀಡಲಾಗಿದ್ದು, ಈವರೆಗೂ 38,76,97,935 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 18-44 ವಯಸ್ಸಿನವರಿಗೆ ಕೊವಿಡ್-19 ಲಸಿಕೆ

ದೇಶದಲ್ಲಿ 18-44 ವಯಸ್ಸಿನವರಿಗೆ ಕೊವಿಡ್-19 ಲಸಿಕೆ

ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 179 ದಿನಗಳಲ್ಲಿ 38.50 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 18 ರಿಂದ 44 ವಯೋಮಾನದ 15,49,982 ಜನರಿಗೆ ಮೊದಲ ಡೋಸ್ ಹಾಗೂ 1,19,121 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,59,50,619 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 40,19,089 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

10 ಮತ್ತು 50 ಲಕ್ಷಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು

10 ಮತ್ತು 50 ಲಕ್ಷಕ್ಕಿಂತ ಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+