ಭಾರತದಲ್ಲಿ ಒಂದೇ ದಿನ 3,92,488 ಮಂದಿಗೆ ಕೊರೊನಾವೈರಸ್

ನವದೆಹಲಿ, ಮೇ 2: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯ ಹರಡುವಿಕೆ ವೇಗ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 3689 ಮಂದಿ ಕೊವಿಡ್-19 ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 3,07,865 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,95,57,457 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಮಹಾಮಾರಿಗೆ ಈವರೆಗೂ 2,15,542 ಸೋಂಕಿತರು ಬಲಿಯಾಗಿದ್ದು, 1,59,92,271 ಮಂದಿ ಗುಣಮುಖರಾಗಿದ್ದಾರೆ. ಇದರ ಹೊರತಾಗಿ 33,49,644 ಸಕ್ರಿಯ ಪ್ರಕರಣಗಳಿವೆ.

392488 New Coronavirus Cases Reported in India in the Last 24 Hours

ಭಾರತದಲ್ಲಿ ಕೊರೊನಾವೈರಸ್ ತಪಾಸಣೆ ವೇಗ ಹೆಚ್ಚಳ

ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 18,04,954 ಜನರಿಗೆ ಕೊವಿಡ್-19 ತಪಾಸಣೆ ಮಾಡಲಾಗಿದೆ. ದೇಶದಲ್ಲಿ ಈವರೆಗೂ 29,01,42,339 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ಕೊವಿಡ್-19 ಸೋಂಕಿಗೆ ನೀಡಿದ ಲಸಿಕೆ

ದೇಶದಲ್ಲಿ ಈವರೆಗೂ 15,68,16,031 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+