• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಬ್ಬಬ್ಬಾ..! ಮತ್ತೆ 4 ಲಕ್ಷ ಗಡಿ ದಾಟಿದ ದೈನಂದಿನ ಕೊರೊನಾ ಸಂಖ್ಯೆ

|
Google Oneindia Kannada News

ನವದೆಹಲಿ, ಮೇ 8: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಭಾರೀ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4,01,078 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

   Corona ನಿನ್ನೆ ಒಂದೇ ದಿನ ಎಷ್ಟು ಬಲಿ ಪಡೆದಿದೆ ? | Oneindia Kannada

   ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,01,078 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 2,18,92,676ಕ್ಕೆ ಏರಿಕೆಯಾಗಿದೆ.

   ದೇಶದ ಅರ್ಧದಷ್ಟು ರಾಜ್ಯಗಳಲ್ಲಿ ಲಾಕ್‌ಡೌನ್ ನಿಯಮ ಜಾರಿಯಲ್ಲಿದ್ದರೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಯಾವುದೇ ಇಳಿಮುಖ ಕಾಣುತ್ತಿಲ್ಲ. ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣವನ್ನೇ ಕಳೆದುಕೊಂಡಿದೆ.

   ಶುಕ್ರವಾರ ಒಂದೇ ದಿನ ಭಾರತದಲ್ಲಿ 3,18,609 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,79,30,960ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 37,23,446 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

   ಶುಕ್ರವಾರ ಒಂದೇ ದಿನ ದೇಶಾದ್ಯಂತ 4,187 ಮಂದಿ ಸೋಂಕಿತರು ಮೃತಪಟ್ಟಿರುವುದು ದೇಶದಲ್ಲಿ ಕೊರೊನಾ ಮರಣ ಮೃದಂಗ ಬಾರಿಸಿದೆ. ಕೊರೊನಾ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ.

   English summary
   According to data provided by the Union Health Ministry, 4,01,078 new Covid-19 Cases have been reported in the country in the last 24 hours.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X