ಕೇಜ್ರಿ ಪರ ಮೋದಿಗೆ ದೂರು ನೀಡಿದ ಎಚ್‌ಡಿಕೆ, ದೀದಿ, ನಾಯ್ಡು, ಪಿಣರಾಯಿ

ನವದೆಹಲಿ, ಜೂನ್ 17: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪರ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾಲ್ಕು ರಾಜ್ಯದ ಮುಖ್ಯಮಂತ್ರಿಗಳು ಇಂದು ದೂರು ನೀಡಿದ್ದಾರೆ.

ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭೇಟಿಗೆ ಸಮಯ ನೀಡುತ್ತಿಲ್ಲ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಇಂದು ನೀತಿ ಆಯೋಗದ ಸಭೆ ಆಯೋಜನೆಯಾಗಿತ್ತು. ಈ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ನಾಲ್ಕು ರಾಜ್ಯದ ಮುಖ್ಯಮಂತ್ರಿಗಳು ಸಭೆಯ ಮಧ್ಯದ ವಿರಾಮದ ಸಂದರ್ಭದಲ್ಲಿ ಪ್ರಧಾನಿಯವರಿಗೆ ಈ ದೂರು ನೀಡಿದ್ದಾರೆ.

4 CMs requests PM Modi to resolve the problems of Delhi government

"ಆಂಧ್ರ ಪ್ರದೇಶ, ಕರ್ನಾಟಕ, ಕೇರಳ ಮುಖ್ಯಮಂತ್ರಿಗಳ ಜೊತೆ ನಾನು ದೆಹಲಿ ಸರಕಾರದ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದೇವೆ," ಎಂದು ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ

ಬೈಜಾಲ್ ಅವರನ್ನು ಭೇಟಿಯಾಗಲು ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಇತರ ಸಚಿವರು ಕಳೆದ ಸೋಮವಾರದಿಂದ ಯತ್ನಿಸುತ್ತಿದ್ದಾರೆ. ಆದರೆ ಇದಕ್ಕೆ ಅನುಮತಿ ನೀಡುತ್ತಿಲ್ಲ. ಅಧಿಕಾರಿಗಳ ಪ್ರತಿಭಟನೆ ಕೊನೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶ ಮಾಡಬೇಕು. ಇದಲ್ಲದೆ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಗೆ ಅನುಮತಿ ನೀಡಬೇಕು ಎಂಬುದು ಕೇಜ್ರಿವಾಲ್ ಅವರ ಬೇಡಿಕೆಯಾಗಿದೆ.

ಬೈಜಾಲ್ ಭೇಟಿಗೆ ಅವಕಾಶ ನೀಡದೇ ಇದ್ದ ಹಿನ್ನೆಲೆಯಲ್ಲಿ, ಅವರೆಲ್ಲಾ ಬೈಜಾಲ್ ಕಚೇರಿಯ ವೇಯ್ಟಿಂಗ್ ರೂಂನಲ್ಲೇ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಧ್ಯ ಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಮೋದಿ ಸ್ಪಂದಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+