ಬೆಂಗಳೂರು ಮೆಟ್ರೋ ಸೇರಿ 4 ಪ್ರಮುಖ ಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ
ನವದೆಹಲಿ: ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ನಮ್ಮ ಮೆಟ್ರೋ ಸೇರಿದಂತೆ ಪ್ರಮುಖ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಹಂತದಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆ ಹಾಗೂ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ ಶಿವಕುಮಾರ್ ಅವರು ವಿವಿಧ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಈಚೆಗೆ ಬೆಂಗಳೂರಿನ ಪ್ರಮುಖ ಯೋಜನೆಯ ಉದ್ಘಾಟನೆಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಬೆಂಗಳೂರಿನ ವಿವಿಧ ಯೋಜನೆಗಳ ಜಾರಿ ಹಾಗೂ ಅಭಿವೃದ್ಧಿ ವಿಚಾರವಾಗಿ ಮಾತನಾಡಿದ್ದರು.

ಇದೀಗ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಬೆಂಗಳೂರಿಗೆ ಸಂಬಂಧಿಸಿದ ನಾಲ್ಕು ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಡಿಸೆಂಬರ್ 23ರ ಮಂಗಳವಾರದಂದು ನವದೆಹಲಿಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್‌ಲಾಲ್ ಖಟ್ಟರ್ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಭೇಟಿ ಮಾಡಿದ್ದು ಕೆಲವೊಂದು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಯೋಜನೆಗಳು ಬೆಂಗಳೂರಿನ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಹೇಳಲಾಗಿದೆ. ಯಾವುದು ಆ ನಾಲ್ಕು ಪ್ರಮುಖ ಯೋಜನೆಗಳು ಎನ್ನುವ ವಿವರ ಇಲ್ಲಿದೆ.
ನಾಲ್ಕು ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ ಡಿಸಿಎಂ
ಬೆಂಗಳೂರಿನ ನಗರ ಭವಿಷ್ಯಕ್ಕೆ ನಿರ್ಣಾಯಕವಾಗಿರುವ ಹಾಗೂ ಅನುಮೋದನೆಗೆ ಬಾಕಿ ಇರುವ ಪ್ರಮುಖ ನಾಲ್ಕು ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ವಿವರವಾದ ಚರ್ಚೆ ನಡೆಯಿತು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಈ ಸಭೆಯಲ್ಲಿ ಮೂಲಸೌಕರ್ಯ ಯೋಜನೆಗಳನ್ನು ವೇಗಗೊಳಿಸಲು ಸಕಾಲಿಕ ಅನುಮತಿಗಳು ಮತ್ತು ಬಲವಾದ ಕೇಂದ್ರ-ರಾಜ್ಯ ಸಮನ್ವಯದ ಅಗತ್ಯದ ಬಗ್ಗೆ ಚರ್ಚೆ ಮಾಡಲಾಗಿದೆ. ನಮ್ಮ ಬದ್ಧತೆ ಸ್ಪಷ್ಟವಾಗಿದೆ: ವೇಗವಾದ ಅಭಿವೃದ್ಧಿ , ಸ್ವಚ್ಛ ನಗರಗಳು ಮತ್ತು ಕರ್ನಾಟಕಕ್ಕೆ ವಿಶ್ವ ದರ್ಜೆಯ ನಗರ ಮೂಲಸೌಕರ್ಯ ಕಲ್ಪಿಸುವುದೇ ಆಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
1. ಮೆಟ್ರೋ ಹಂತ-II ಯೋಜನೆಗೆ ಪರಿಷ್ಕೃತ ವೆಚ್ಚ
2. ಮೆಟ್ರೋ ಹಂತ-III A (ಸರ್ಜಾಪುರ-ಹೆಬ್ಬಾಳ ಕಾರಿಡಾರ್) ಅನುಮೋದನೆ
3. ಬೆಂಗಳೂರು ಪ್ರದೇಶಕ್ಕೆ RRTS ಗೆ ಬೆಂಬಲ
4. ಮಿಟ್ಟಗಾನಹಳ್ಳಿಯಲ್ಲಿ ತ್ಯಾಜ್ಯ ಸಂಸ್ಕರಣಾ ಯೋಜನೆ












Click it and Unblock the Notifications