• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮತ್ತೆ ಶ್ರೀಲಂಕಾದಲ್ಲಿ 4 ಭಾರತೀಯ ಮೀನುಗಾರರ ಬಂಧನ

By Kiran B Hegde
|

ಮಧುರೈ, ನ. 29: ಗಲ್ಲು ಶಿಕ್ಷೆ ವಿಧಿಸಲ್ಪಟ್ಟಿದ್ದ ತಮಿಳುನಾಡು ಮೂಲಕ ಹಲವು ಮಾದಕ ವಸ್ತು ಸಾಗಾಣಿಕೆದಾರರನ್ನು ಶ್ರೀಲಂಕಾ ಈಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಕೋರಿಕೆಯ ಮೇರೆಗೆ ಬಿಡುಗಡೆ ಮಾಡಿತ್ತು.

ಆದರೆ, ಶುಕ್ರವಾರ ರಾತ್ರಿ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ಮತ್ತೆ ತಮ್ಮ ದೇಶದ ಗಡಿ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ತಮಿಳುನಾಡಿನ ನಾಲ್ವರು ಮೀನುಗಾರರನ್ನು ಬಂಧಿಸಿದ್ದಾರೆ. [ತಮಿಳುನಾಡು ಮೀನುಗಾರರ ಬಿಡುಗಡೆ]

ಇವರು ತಮಿಳುನಾಡಿನ ನಾಗಪಟ್ಟಣಂ ಸಮೀಪದ ಪುಷ್ಪವನಂ ಗ್ರಾಮದ ನಿವಾಸಿಗಳು. ಶುಕ್ರವಾರ ರಾತ್ರಿ ಮೀನು ಹಿಡಿಯುವ ಉದ್ದೇಶದಿಂದ ಸಮುದ್ರಕ್ಕೆ ತೆರಳಿದ್ದವರು ನಂತರ ಕಾಣೆಯಾಗಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. [ಮೋದಿ ದೆಸೆಯಿಂದ ಮೀನುಗಾರರಿಗೆ ಬಿಡುಗಡೆ ಭಾಗ್ಯ]

ವಿಷಯ ತಿಳಿಯುತ್ತಿದ್ದಂತೆ ಅವರ ಪತ್ತೆಗಾಗಿ ಕರಾವಳಿ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಮುಂದಾದರೂ ಪ್ರಯೋಜನವಾಗಿರಲಿಲ್ಲ.

ಮೀನು ಹಿಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಅಲೆಗಳ ಪ್ರಮಾಣ ಹೆಚ್ಚಾಗಿದೆ. ಈ ಕಾರಣದಿಂದ ಮೀನುಗಾರರು ಜೀವರಕ್ಷಣೆಗಾಗಿ ಶ್ರೀಲಂಕಾ ಸಮುದ್ರ ಗಡಿ ಭಾಗದತ್ತ ತೆರಳಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾ ಪಡೆ ಸಿಬ್ಬಂದಿ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಲು ಸ್ಪಷ್ಟಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Shrilankan navy arrested 4 Tamilnadu fishermen accusing illegal entry inside sea border of the nation. They went for fishing on Friday, but did not return. Saturday officials of fisheries department have confirmed of their arrest in Shrilanka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more