ಅಸ್ಸಾಂ: ಪೊಲೀಸರ ಗುಂಡೆಟಿಗೆ ನಾಲ್ವರು ಬಲಿ
ಬೆಂಗಳೂರು, ಆ, 21 : ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಅಸ್ಸಾಂನಲ್ಲಿ ಮತ್ತೆ ಘರ್ಷಣೆ ಭುಗಿಲೆದ್ದಿದೆ. ಹಿಂಸಾಪೀಡಿತ ಗೋಲ್ಗಾಟ್ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ 4 ಜನ ಬಲಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಗೋಲ್ಗಾಟ್ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಆದರೂ ಸದಾರ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರತಿಭಟನಾನಿರತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸರ ಮೇಲೆ ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾನಿರತರು ಕಲ್ಲುಗಳನ್ನು ಎಸೆದು ಹಲ್ಲೆ ಮಾಡಲು ಮುಂದಾದರು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ನಾಲ್ಕು ಜನ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲ ಸಂಬಂಧಿಸಿದ ರಾಜ್ಯಗಳ ವರದಿ ಕೇಳಿದ್ದು, ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಮತ್ತು ನಾಗಾಲ್ಯಾಂಡ್ ಮುಖ್ಯಮಂತ್ತಿ ಟಿ.ಆರ್.ಜೆಲಿನ್ ಜತೆ ಮಾತುಕತೆ ನಡೆಸಲಿದೆ. ಈ ಮೂಲಕ ಸಮಸ್ಯೆಗೆ ಪರಿಹಾರ ಹುಡುಕಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications