ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ: ಪೊಲೀಸರ ಗುಂಡೆಟಿಗೆ ನಾಲ್ವರು ಬಲಿ

|
Google Oneindia Kannada News

ಬೆಂಗಳೂರು, ಆ, 21 : ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಅಸ್ಸಾಂನಲ್ಲಿ ಮತ್ತೆ ಘರ್ಷಣೆ ಭುಗಿಲೆದ್ದಿದೆ. ಹಿಂಸಾಪೀಡಿತ ಗೋಲ್ಗಾಟ್ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ 4 ಜನ ಬಲಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ.

ಗೋಲ್ಗಾಟ್ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಆದರೂ ಸದಾರ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರತಿಭಟನಾನಿರತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸರ ಮೇಲೆ ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾನಿರತರು ಕಲ್ಲುಗಳನ್ನು ಎಸೆದು ಹಲ್ಲೆ ಮಾಡಲು ಮುಂದಾದರು.

assam

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ನಾಲ್ಕು ಜನ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೇಂದ್ರ ಗೃಹ ಸಚಿವಾಲ ಸಂಬಂಧಿಸಿದ ರಾಜ್ಯಗಳ ವರದಿ ಕೇಳಿದ್ದು, ಅಸ್ಸಾಂ ಮುಖ್ಯಮಂತ್ರಿ ತರುಣ್‌ ಗೊಗೊಯ್‌ ಮತ್ತು ನಾಗಾಲ್ಯಾಂಡ್‌ ಮುಖ್ಯಮಂತ್ತಿ ಟಿ.ಆರ್.ಜೆಲಿನ್‌ ಜತೆ ಮಾತುಕತೆ ನಡೆಸಲಿದೆ. ಈ ಮೂಲಕ ಸಮಸ್ಯೆಗೆ ಪರಿಹಾರ ಹುಡುಕಲು ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

English summary
Tension escalated along the “disputed” Assam-Nagaland border on Wednesday as four persons were killed and at least 30 wounded in police firing in Assam’s Golaghat following violent protests, prompting the Centre to become proactive in handling the situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X