• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎನ್‌ಪಿಪಿ ಯೂ ಟರ್ನ್; ಮಣಿಪುರದ ಬಿಜೆಪಿ ಸರ್ಕಾರ ಸುಭದ್ರ!

|

ಇಂಫಾಲ, ಜೂನ್ 25 : ನ್ಯಾಷನಲ್ ಪೀಪಲ್ಸ್ ಪಾರ್ಟಿಯ ನಾಲ್ವರು ಶಾಸಕರು ಮಣಿಪುರದ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಕಳೆದ ವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರಕ್ಕೆ ನೀಡಿದ ಬೆಂಬಲ ವಾಪಸ್ ಪಡೆದಿದ್ದರು.

   ಜನಸಾಮಾನ್ಯರಿಗೆ ಒಂದು ನ್ಯಾಯ, ರಾಜಕಾರಣಿಗಳಿಗೊಂದು ನ್ಯಾಯ | Oneindia Kannada

   ಗುರುವಾರ ಎನ್‌ಪಿಪಿಯ ನಾಲ್ವರು ಶಾಸಕರು ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಭೇಟಿ ಮಾಡಿದರು. ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನಮ್ಮ ಬೆಂಬಲ ನೀಡುವುದಾಗಿ ಪತ್ರವನ್ನು ನೀಡಿದರು.

   ಬಿಜೆಪಿ ಸರ್ಕಾರಕ್ಕೆ ಸಂಕಷ್ಟ; ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್!

   ರಾಜ್ಯಪಾಲರನ್ನು ಭೇಟಿಯಾದ ಬಳಿಕ ನಾಲ್ವರು ಶಾಸಕರು ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಭೇಟಿ ಮಾಡಿದರು. ಪಕ್ಷದ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಅಸ್ಸಾಂನ ಸಚಿವ ಹಿಮಂತ ಬಿಸ್ವಾ ಶರ್ಮಾ ಶಾಸಕರ ಜೊತೆ ನಡೆಸಿದ ಮಾತುಕತೆ ಫಲ ನೀಡಿದ್ದು ಎಲ್ಲರೂ ಯೂ ಟರ್ನ್ ತೆಗೆದುಕೊಂಡಿದ್ದಾರೆ.

   ಮಣಿಪುರ ಮತ್ತೆ ಬಿಜೆಪಿ ವಶಕ್ಕೆ, ಅಮಿತ್ ಶಾ ಸಂಧಾನ ಸಫಲ

   ರಾಜ್ಯಪಾಲೆ ನಜ್ಮಾ ಹೆಪ್ತುಲ್ಲಾ ಎನ್‌ಪಿಪಿ ಶಾಸಕರು ಭೇಟಿ ಮಾಡಿದ ಕುರಿತು ಟ್ವೀಟ್ ಮಾಡಿದ್ದಾರೆ. ನಾಲ್ವರು ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವ ಪತ್ರವನ್ನು ನೀಡಿದ್ದಾರೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

   ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಹುದ್ದೆಗೆ 12 ಶಾಸಕರ ರಾಜೀನಾಮೆ; ಬಿಜೆಪಿಗೆ ಗುಳೆ ವದಂತಿ

   ಅಮಿತ್ ಶಾ ಜೊತೆ ಮಾತುಕತೆ

   ಅಮಿತ್ ಶಾ ಜೊತೆ ಮಾತುಕತೆ

   ಬುಧವಾರ ಎನ್‌ಪಿಪಿಯ ನಾಲ್ವರು ಶಾಸಕರು ನವದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿದ್ದರು. "ಶಾಸಕರ ಸಮಸ್ಯೆಗಳೆಲ್ಲವೂ ಬಗೆಹರಿದಿದೆ" ಎಂದು ಮೇಘಾಲಯ ಮುಖ್ಯಮಂತ್ರಿ ಕೋನ್ರಾಡ್ ಸಂಗ್ಮಾ ಹೇಳಿದ್ದಾರೆ.

   ಸಚಿವರಾಗಿ ಮುಂದುವರೆಯಲಿದ್ದಾರೆ

   ಸಚಿವರಾಗಿ ಮುಂದುವರೆಯಲಿದ್ದಾರೆ

   ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಲ್ವರು ಶಾಸಕರು ರಾಜೀನಾಮೆ ವಾಪಸ್ ಪಡೆಯಲಿದ್ದು, ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಮುಂದುವರೆಯಲಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ.

   ಅಲ್ಪ ಮತಕ್ಕೆ ಕುಸಿದಿದ್ದ ಸರ್ಕಾರ

   ಅಲ್ಪ ಮತಕ್ಕೆ ಕುಸಿದಿದ್ದ ಸರ್ಕಾರ

   2017ರಲ್ಲಿ ನಡೆದ ಮಣಿಪುರ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಎನ್‌ಪಿಪಿಯ 9 ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿತ್ತು. ಶಾಸಕರು ಕಳೆದ ವಾರ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಲ್ಪ ಮತಕ್ಕೆ ಕುಸಿದಿತ್ತು.

   ಅವಿಶ್ವಾಸ ನಿರ್ಣಯ ಮಂಡನೆ

   ಅವಿಶ್ವಾಸ ನಿರ್ಣಯ ಮಂಡನೆ

   ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಾಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು. ವಿಶೇಷ ಅಧಿವೇಶನ ಕರೆದು ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿತ್ತು.

   English summary
   4 MLA's delegation of National People's Party met Najma Heptulla governor of Manipur and gave their letter of support to BJP led government in the state.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X