ಸಿಯಾಚಿನ್‌ನಲ್ಲಿ ಹಿಮಪಾತ; ನಾಲ್ವರು ಯೋಧರ ದುರ್ಮರಣ
Recommended Video
ನವದೆಹಲಿ, ನವೆಂಬರ್ 18 : ಸಿಯಾಚಿನ್ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಪಹರೆ ಕಾಯುತ್ತಿದ್ದ ನಾಲ್ವರು ಯೋಧರು ಸಹ ಮೃತಪಟ್ಟಿದ್ದು, 3 ಮೃತದೇಹಗಳು ಸಿಕ್ಕಿವೆ.
ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಹಿಮಪಾತ ಸಂಭವಿಸಿದೆ. ಈ ವೇಳೆ ಗಸ್ತು ತಿರುಗುತ್ತಿದ್ದ ಯೋಧರು ಹಿಮದಡಿ ಸಿಲುಕಿದರು. ಹಿಮಾಲಯದ ಉತ್ತರ ತುದಿಯ ಲಡಾಖ್ ಪ್ರದೇಶದಲ್ಲಿ ಹಿಮಪಾತವಾಗಿದೆ. ನಾಲ್ವರು ಯೋಧರು ಸೇರಿದಂತೆ 6 ಜನರು ಹಿಮದಡಿ ಸಿಲುಕಿ ಮೃತಪಟ್ಟಿದ್ದಾರೆ.
ಸಿಯಾಚಿನ್ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾಗಿದೆ. 1984 ರಿಂದ ಇದುವರೆಗೂ ಭಾರತ ಮತ್ತು ಪಾಕಿಸ್ತಾನದ ಹಲವು ಯೋಧರು ಇಲ್ಲಿ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಸಮುದ್ರಮಟ್ಟದಿಂದ ಈ ಪ್ರದೇಶ ಸುಮಾರು 19 ಸಾವಿರ ಅಡಿ ಎತ್ತರದಲ್ಲಿದೆ.

ಹಿಮಪಾತದಲ್ಲಿ ಸಿಲುಕಿದವರ ರಕ್ಷಣೆ ಮಾಡುವ ತಂಡ ಸ್ಥಳಕ್ಕೆ ಧಾವಿಸಿದ್ದು, ಇದುವರೆಗೂ 3 ಮೃತದೇಹಗಳು ಸಿಕ್ಕಿವೆ. ಮೃತಪಟ್ಟವರ ವಿವರ ಇನ್ನೂ ಲಭ್ಯವಾಗಿಲ್ಲ. ಹಿಮದಡಿ ಸಿಲುಕಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
2016ರ ಫೆಬ್ರವರಿಯಲ್ಲಿ ಸಿಯಾಚಿನ್‌ನಲ್ಲಿ ನಡೆದ ಹಿಮಪಾತದಲ್ಲಿ 10 ಯೋಧರು ಮೃತಪಟ್ಟಿದ್ದರು. 25 ಅಡಿ ಆಳದ ಹಿಮದಲ್ಲಿ ಕರ್ನಾಟಕದ ಹನುಮಂತಪ್ಪ ಕೊಪ್ಪದ್ ಸಿಲುಕಿದ್ದರು. ಆರು ದಿನಗಳ ಬಳಿಕ ಅವರನ್ನು ಹೊರತೆಗೆಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
ಪಾಕಿಸ್ತಾನ ಮತ್ತು ಚೀನಾ ಸೈನಿಕರು ಗಡಿ ದಾಟಿ ಒಳ ನುಗ್ಗಲು ಪ್ರಯತ್ನ ನಡೆಸುತ್ತಾರೆ. ಆದ್ದರಿಂದ, ಸಿಯಾಚಿನ್‌ನಲ್ಲಿ ಭಾರತೀಯ ಸೇನೆ 800 ಸೈನಿಕರನ್ನು ಗಸ್ತಿಗೆ ನಿಯೋಜನೆ ಮಾಡುತ್ತದೆ. ಇಲ್ಲಿರುವ ಸೇನಾ ಶಿಬಿರದ ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ.
ಸಿಯಾಚಿನ್ ಸೇನಾ ನೆಲೆಯಲ್ಲಿ - 50 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುತ್ತದೆ. ಯೋಧರು ಊಟ, ಟೀಗಾಗಿ ಅಪಾರ ವೆಚ್ಚವಾಗುತ್ತದೆ. ಇಲ್ಲಿ ಪಹರೆ ಕಾಯುವ ಸೈನಿಕರಿಗೆ ವಿಶೇಷ ಬೂಟು, ಕಾಲುಚೀಲ ಸೇರಿದಂತೆ ವಿಶೇಷ ಸೌಲಭ್ಯ ನೀಡಲಾಗುತ್ತದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications