ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆಯಾಗುವುದು ಖಚಿತವಾಗಿದೆ. 4 ರಾಜ್ಯಗಳು ಈಗಾಗಲೇ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿವೆ. ಕೊರೊನಾ ನಿಯಂತ್ರಣಕ್ಕೆ ಅದು ಅಗತ್ಯವಾಗಿದೆ ಎಂದು ಹೇಳಿವೆ.

Lockdown

ಒಡಿಶಾ, ಪಂಜಾಬ್, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳು ಲಾಕ್ ಡೌನ್‌ ಅನ್ನು ಏಪ್ರಿಲ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿವೆ. ಲಾಕ್ ಡೌನ್ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ದೇಶದಲ್ಲಿಯೇ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು (1761) ಕೊರೊನಾ ಸೋಂಕಿತರು ಇದ್ದಾರೆ. ತೆಲಂಗಾಣದಲ್ಲಿ 503, ಪಂಜಾಬ್‌ನಲ್ಲಿ 158, ಒಡಿಶಾಸದಲ್ಲಿ 54 ಕೊರೊನಾ ಪ್ರಕರಣಗಳು ದಾಖಲಾಗಿವೆ.

ವಿವಿಧ ರಾಜ್ಯಗಳು ಲಾಕ್ ಡೌನ್ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿವೆ. ಸೋಮವಾರ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಮಾಡಿದರೆ ವಾಣಿಜ್ಯ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದ್ದು, ರಾಜ್ಯಗಳ ಖಜಾನೆಗೆ ಅಪಾರವಾದ ನಷ್ಟ ಉಂಟಾಗಲಿದೆ. ಆದರೆ, ಕೊರೊನಾ ಸಮುದಾಯದಲ್ಲಿ ಹರಡದಂತೆ ತಡೆಯಲು ಈ ಕ್ರಮ ಅನಿವಾರ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+