ಸರ್ಕಾರದ ನಿರ್ಲಕ್ಷ್ಯದಿಂದ 40 ಲಕ್ಷ ಭಾರತೀಯರು ಕೋವಿಡ್‌ಗೆ ಬಲಿ: ರಾಹುಲ್ ಕಿಡಿ
ನವದೆಹಲಿ, ಏಪ್ರಿಲ್ 17: "ಸರ್ಕಾರದ ನಿರ್ಲಕ್ಷ್ಯ" ದಿಂದ ಭಾರತದಲ್ಲಿ ಕನಿಷ್ಠ 40 ಲಕ್ಷ ಜನರು ಕೋವಿಡ್ -19 ಗೆ ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರತಿಪಾದಿಸಿದ್ದಾರೆ. ಪ್ರತಿ ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ನೀಡುಬೇಕು ಎಂದು ಆಗ್ರಹ ಮಾಡಿದ್ದಾರೆ.
ದೇಶದಲ್ಲಿನ ಕೋವಿಡ್ ಸಾವಿನ ಸಂಖ್ಯೆಯನ್ನು ಬಹಿರಂಗಪಡಿಸುವ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ಹೇಳುವ ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡ ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಟ್ವೀಟ್ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ ಅಥವಾ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ," ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಉಲ್ಲೇಖ ಮಾಡಿ ಈ ಟ್ವೀಟ್ ಮಾಡಿದ್ದಾರೆ.

ಪ್ರತಿ ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರಕ್ಕೆ ಆಗ್ರಹ
"ಕೋವಿಡ್‌ನಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದ 5 ಲಕ್ಷ ಅಲ್ಲ, 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ," ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಹಾಗೆಯೇ ಮೋದಿಜೀ ಜವಾಬ್ದಾರಿ ನಿಭಾಯಿಸಿಕೊಳ್ಳಿ. ಪ್ರತಿ ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಿ," ಎಂದು ರಾಹುಲ್ ಗಾಂಧಿ ಆಗ್ರಹ ಮಾಡಿದ್ದಾರೆ.
मोदी जी ना सच बोलते हैं, ना बोलने देते हैं।
— Rahul Gandhi (@RahulGandhi) April 17, 2022
वो तो अब भी झूठ बोलते हैं कि oxygen shortage से कोई नहीं मरा!
मैंने पहले भी कहा था - कोविड में सरकार की लापरवाहियों से 5 लाख नहीं, 40 लाख भारतीयों की मौत हुई।
फ़र्ज़ निभाईये, मोदी जी - हर पीड़ित परिवार को ₹4 लाख का मुआवज़ा दीजिए। pic.twitter.com/ZYKiSK2XMJ
ಕೋವಿಡ್‌ನಿಂದ ಎಷ್ಟು ಸಾವು ಎಂದಿದೆ ಕೇಂದ್ರ ಸರ್ಕಾರ?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಸಾವು ಪ್ರಮಾಣವನ್ನು ವರದಿ ಮಾಡಿದೆ. ಆದರೆ ಇದು ಸಾಂಕ್ರಾಮಿಕ ರೋಗದಿಂದಾಗಿ ಜಾಗತಿಕ ಸಾವಿನ ಸಂಖ್ಯೆಯನ್ನು ಅಂದಾಜು ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಅಳವಡಿಸಿಕೊಂಡ ವಿಧಾನದಂತೆ ಇಲ್ಲ. ಆರೋಗ್ಯ ಸಚಿವಾಲಯದ ಪ್ರಕಾರ, ಎಲ್ಲಾ ದೇಶಗಳಿಗೆ, ವಿಶೇಷವಾಗಿ ಭಾರತದಂತಹ ದೊಡ್ಡ ದೇಶಗಳಿಗೆ ಒಂದೇ ಮಾದರಿಯನ್ನು ಅನ್ವಯಿಸಲಾಗುವುದಿಲ್ಲ.

ದೇಶದಲ್ಲಿ ನಾಲ್ಕು ಪಟ್ಟು ಅಧಿಕ ಕೋವಿಡ್ ಸಾವು
ವಿಶ್ವ ಆರೋಗ್ಯ ಸಂಸ್ಥೆಯ ವಿಧಾನವನ್ನು ಬಳಸಿಕೊಂಡು ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕದ ಸಾವಿನ ಪ್ರಮಾಣವನ್ನು ಲೆಕ್ಕ ಹಾಕಿದರೆ, ದೇಶದಲ್ಲಿ ಸುಮಾರು 15 ಮಿಲಿಯನ್ ಸಾವುಗಳು ಸಂಭವಿಸಿದೆ ಎಂದು ಅಂದಾಜು ಮಾಡಬಹುದಾಗಿದೆ. ಭಾರತದಲ್ಲಿ ಸುಮಾರು 40 ಲಕ್ಷ ಸಾವುಗಳನ್ನು ವಿಶ್ವ ಆರೋಗ್ಯ ಸಂಸ್ಥೆಯು ಅಂದಾಜು ಮಾಡಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇದು ಭಾರತದಲ್ಲಿ ಪ್ರಸ್ತುತ ದಾಖಲಾಗಿರುವ ಸಾವು ಪ್ರಮಾಣಕ್ಕಿಂತ ಎಂಟು ಪಟ್ಟು ಹೆಚ್ಚು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಆರೋಗ್ಯ ಸಚಿವಾಲಯವು ಏಪ್ರಿಲ್ 16 ರಂದು 'ಗ್ಲೋಬಲ್ ಕೋವಿಡ್ ಡೆತ್ ಟೋಲ್ ಪಬ್ಲಿಕ್ ಮಾಡಲು ವಿಶ್ವ ಆರೋಗ್ಯ ಸಂಸ್ಥೆಯನ್ನು ತಡೆಯುತ್ತಿದೆ ಎಂಬ ಶೀರ್ಷಿಕೆಯ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಹೇಳಿಕೆಯನ್ನು ನೀಡಿದೆ. ದೇಶವು ಹಲವಾರು ಸಂದರ್ಭಗಳಲ್ಲಿ ಬಳಸಿದ ವಿಧಾನದ ಬಗ್ಗೆ ಜಾಗತಿಕ ಆರೋಗ್ಯ ಸಂಸ್ಥೆಯೊಂದಿಗೆ ತನ್ನ ಕಳವಳಗಳನ್ನು ಹಂಚಿಕೊಂಡಿದೆ ಎಂದು ಹೇಳಿದೆ.
ಸರ್ಕಾರವು ಕೋವಿಡ್-19 ಸಾವಿನ ನಿಜವಾದ ಅಂಕಿಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಈ ಹಿಂದೆಯೇ ಆರೋಪ ಮಾಡಿದೆ. ಮೃತರ ಕುಟುಂಬ ಸದಸ್ಯರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಕೂಡಾ ಒತ್ತಾಯ ಮಾಡಿದೆ. ಭಾನುವಾರದವರೆಗಿನ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಕೋವಿಡ್ ಸಾವಿನ ಸಂಖ್ಯೆ 5,21,751 ಆಗಿದೆ.












Click it and Unblock the Notifications