ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೇಹ್ ನಲ್ಲಿನ ನಾಲ್ಕು ಸಾವಿರ ಯೋಧರಿಗೆ ಮೊದಲ ದಿನ ಲಸಿಕೆ

|
Google Oneindia Kannada News

ನವದೆಹಲಿ, ಜನವರಿ 16: ಭಾರತದಲ್ಲಿ ಶನಿವಾರ ಬೃಹತ್ ಲಸಿಕಾ ಅಭಿಯಾನ ಆರಂಭಗೊಳ್ಳುತ್ತಿದ್ದು, ಲಡಾಖ್ ಲೇಹ್ ನಲ್ಲಿ ಸುಮಾರು ನಾಲ್ಕು ಸಾವಿರ ಯೋಧರು ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಪಡೆಯಲಿದ್ದಾರೆ.

ಉತ್ತರ ಗಡಿಯಲ್ಲಿ ನಿಯೋಜಿಸಲಾಗಿರುವ ಯೋಧರಿಗೆ ಆದ್ಯತೆಯಲ್ಲಿ ಕೊರೊನಾ ಲಸಿಕೆ ನೀಡುವ ಉದ್ದೇಶವಿದ್ದು, ಲಡಾಖ್ ವಲಯದಲ್ಲಿ ಮೊದಲು ಲಸಿಕೆಗಳನ್ನು ನೀಡಲಾಗುತ್ತದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.

ಉತ್ತರ ಭಾರತದ ರಾಜ್ಯಗಳಲ್ಲಿ ಕೊವಿಡ್-19 ಲಸಿಕೆ ಕೇಂದ್ರಗಳ ಮಾಹಿತಿಉತ್ತರ ಭಾರತದ ರಾಜ್ಯಗಳಲ್ಲಿ ಕೊವಿಡ್-19 ಲಸಿಕೆ ಕೇಂದ್ರಗಳ ಮಾಹಿತಿ

ಮೊದಲ ಹಂತದ ಲಸಿಕೆಗಳನ್ನು ಲೇಹ್ ನಲ್ಲಿ ನಿಯೋಜಿಸಲಾಗಿರುವ ಸುಮಾರು ನಾಲ್ಕು ಸಾವಿರ ಸೈನಿಕರಿಗೆ ಲಸಿಕೆಗಳನ್ನು ನೀಡಲಾಗುತ್ತಿದೆ. ಲಡಾಖ್ ನಲ್ಲಿ ನಿಗದಿತವಾಗಿ ಲಸಿಕೆ ನೀಡಲಾಗುತ್ತಿದೆ. ಮೊದಲು ಆರೋಗ್ಯ ಕಾರ್ಯಕರ್ತರಿಗೆ ಅವಶ್ಯಕವಿದ್ದಷ್ಟು ಲಸಿಕೆಗಳು ಲಭ್ಯವಿಲ್ಲದ ಕಾರಣ ಲಸಿಕೆಗಳ ಉತ್ಪಾದನೆ ಹೆಚ್ಚಾದ ನಂತರ ಲಡಾಖ್ ನಲ್ಲಿರುವ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

4000 Soldiers In Leh To Get Covid Vaccine On First Day Of Vaccination

ಕಳೆದ ಮೇ ತಿಂಗಳಿನಿಂದಲೂ ಚೀನಾ ಭಾರತ ಗಡಿ ವಿವಾದದಿಂದಾಗಿ ಹೆಚ್ಚಿನ ಸೈನ್ಯವನ್ನು ಗಡಿಯಲ್ಲಿ ನಿಯೋಜಿಸಲಾಗಿದೆ. ಆದರೆ ಲಡಾಖ್ ನಲ್ಲಿ ಹೆಚ್ಚಿನ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಮೊದಲು ಯೋಧರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗುತ್ತಿದೆ.

ಕಳೆದ ವರ್ಷ ಸೆಪ್ಟೆಂಬರ್ ವೇಳೆಗೆ ಸುಮಾರು ಇಪ್ಪತ್ತು ಸಾವಿರ ಮಿಲಿಟರಿ ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದರು. ಕೊರೊನಾ ಸೋಂಕಿನಿಂದ ಇದುವರೆಗೂ 32 ಸೈನಿಕರು ಸಾವನ್ನಪ್ಪಿದ್ದಾರೆ.

English summary
4,000 Army soldiers posted in Leh, Ladakh, will receive the Covid-19 vaccine Saturday as vaccination drive kicks off in India
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X