ಹೊಸ ಆತಂಕ: 24 ಗಂಟೆಗಳಲ್ಲೇ 40134 ಮಂದಿಗೆ ಕೊರೊನಾವೈರಸ್!

ನವದೆಹಲಿ, ಆಗಸ್ಟ್ 2: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಆತಂಕ ಹೆಚ್ಚಾಗಿದೆ. ದೇಶದಲ್ಲಿ 30,000ಕ್ಕಿಂತ ಕಡಿಮೆಯಾಗಿದ್ದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇದೀಗ ಮತ್ತೆ 40,000ದ ಗಡಿ ದಾಟುತ್ತಿದೆ. ಪ್ರತಿನಿತ್ಯ ಚೇತರಿಕೆ ಸಂಖ್ಯೆಗಳಿಗಿಂತ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರುಮುಖವಾಗಿ ಸಾಗುತ್ತಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಕಳೆದ 24 ಗಂಟೆಗಳಲ್ಲಿ 40,134 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 36,946 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,16,95,958ಕ್ಕೆ ಏರಿಕೆಯಾಗಿದೆ. ಈವರೆಗೂ 3,08,57,467 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,24,773 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,13,718 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊವಿಡ್-19 ಸೋಂಕಿನ ಪರೀಕ್ಷೆ ಪ್ರಮಾಣ

ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 14,28,984 ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 46,96,45,494 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರ ಸಂಖ್ಯೆ

ಭಾರತದಲ್ಲಿ ಈವರೆಗೂ ಲಸಿಕೆ ಪಡೆದವರ ಸಂಖ್ಯೆ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ ಈವರೆಗೂ 47 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17,06,598 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 47,22,23,639 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

2021ರ ಆಗಸ್ಟ್ 1ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 49,49,89,550 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 49,49,89,550

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 8,04,220

* ಬಳಕೆ ಆಗಿರುವ ಲಸಿಕೆ ಪ್ರಮಾಣ - 46,70,26,662

* ಕೊವಿಡ್-19 ಲಸಿಕೆಯ ಲಭ್ಯತೆ - 3,00,58,190

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+