ಭಾರತದಲ್ಲಿ 24 ಗಂಟೆಯಲ್ಲಿ 4,03,738 ಹೊಸ ಕೋವಿಡ್ ಪ್ರಕರಣ
ನವದೆಹಲಿ, ಮೇ 09; ಭಾರತದಲ್ಲಿ 24 ಗಂಟೆಯಲ್ಲಿ 4,03,738 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,22,96,414.
ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ 3,86,444 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 4092 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖಗೊಂಡವರ ಸಂಖ್ಯೆ 1,83,17,404. ಒಟ್ಟು ಮೃತಪಟ್ಟವರ ಸಂಖ್ಯೆ 2,42,362. ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648.

ಮೇ 8ರ ತನಕ ದೇಶದಲ್ಲಿ 30,22,75,471 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಮೇ 8ರಂದು 18,65,428 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಯಾವ ರಾಜ್ಯದಲ್ಲಿ ಎಷ್ಟು?; ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಶನಿವಾರ ರಾಜ್ಯದಲ್ಲಿ 56,578 ಹೊಸ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 6,28,213 ಆಗಿದೆ.
ಕರ್ನಾಟಕದಲ್ಲಿ 47,563 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 18,86,448ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,48,841ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ 41,971. ಉತ್ತರ ಪ್ರದೇಶದಲ್ಲಿ 26,363. ತಮಿಳನಾಡಿನಲ್ಲಿ 27,397. ದೆಹಲಿಯಲ್ಲಿ 17,364. ಆಂಧ್ರ ಪ್ರದೇಶದಲ್ಲಿ 20,065 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಕೋವಿಡ್ ಹರಡುವಿಕೆ ತಡೆಯಲು ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ಕರ್ನಾಟಕ ರಾಜ್ಯಗಳು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿವೆ.












Click it and Unblock the Notifications