ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ 41,322 ಹೊಸ ಕೋವಿಡ್ ಪ್ರಕರಣಗಳು ಪತ್ತೆ

|
Google Oneindia Kannada News

ನವದೆಹಲಿ, ನವೆಂಬರ್ 28: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಭಾರತದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 93,51,110ಕ್ಕೆ ಏರಿಕೆಯಾಗಿದೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ 485 ಮಂದಿ ಸಾವಿನ ಪ್ರಕರಣಗಳೊಂದಿಗೆ ಒಟ್ಟು ಸಾವಿನ ಸಂಖ್ಯೆ 1,36,200ಕ್ಕೇರಿದೆ.

ಶನಿವಾರ ಬೆಳಗಿನ ವೇಳೆಗೆ ದೇಶದಾದ್ಯಂತ 41,452 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 4,54,940ಕ್ಕೆ ಇಳಿಕೆಯಾಗಿದೆ. ಇದುವರೆಗೂ 87,59,969 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

 ದೇಶದ 10 ರಾಜ್ಯಗಳಲ್ಲಿ ಶೇ. 77ರಷ್ಟು ಕೋವಿಡ್-19 ಸಕ್ರಿಯ ಪ್ರಕರಣಗಳಿವೆ: ಸುಪ್ರೀಂಗೆ ತಿಳಿಸಿದ ಕೇಂದ್ರ ಸರ್ಕಾರ ದೇಶದ 10 ರಾಜ್ಯಗಳಲ್ಲಿ ಶೇ. 77ರಷ್ಟು ಕೋವಿಡ್-19 ಸಕ್ರಿಯ ಪ್ರಕರಣಗಳಿವೆ: ಸುಪ್ರೀಂಗೆ ತಿಳಿಸಿದ ಕೇಂದ್ರ ಸರ್ಕಾರ

ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಶೇ 77 ರಷ್ಟು ಸಕ್ರಿಯ ಪ್ರಕರಣಗಳು ಹತ್ತು ರಾಜ್ಯಗಳಲ್ಲಿಯೇ ಇವೆ. ಇದರಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳಲ್ಲಿ ಶೇ 33ರಷ್ಟು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

41,322 Fresh Coronavirus Cases In India in Last 24 Hours, 485 Deaths Reported

Recommended Video

ಕಾನೂನು ಬಾಹಿರ ಮತಾಂತರ ನಿಷೇಧ ಸುಗ್ರೀವಾಜ್ಞೆ | UP | Oneindia Kannada

ಹಬ್ಬದ ಅವಧಿ ಬಳಿಕ ದೇಶದ ಅನೇಕ ಭಾಗಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ರೂಪಿಸಿದರಷ್ಟೇ ಸಾಲದು, ಕಠಿಣ ಮಾರ್ಗದರ್ಶಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದೆ. ಎರಡನೆಯ ಅಲೆಯು ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರು ಗುಂಪುಗೂಡುವುದನ್ನು ತಡೆಯಬೇಕು ಎಂದು ಸಲಹೆ ನೀಡಿದೆ.

English summary
41,322 fresh coronavirus cases and 485 deaths were reported across India in last 24 hours. 41,452 people discharged from hospitals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X