ದೇಶದಲ್ಲಿ 41,383 ಕೊರೊನಾ ಪ್ರಕರಣ ದಾಖಲು; ಗಣನೀಯವಾಗಿ ತಗ್ಗಿದ ಸಾವಿನ ಸಂಖ್ಯೆ

ನವದೆಹಲಿ, ಜುಲೈ 22: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ.

ಕಳೆದ 24 ಗಂಟೆಗಳಲ್ಲಿ 41,383 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ 507 ಮಂದಿ ಸೋಂಕಿನಿಂದ ಸಾವನ್ನಪ್ಪಿರುವ ವರದಿಯಾಗಿದೆ. ಪ್ರತಿನಿತ್ಯ ಮೂರು ಸಾವಿರದ ಅಂಚಿನಲ್ಲಿದ್ದ ಸಾವಿನ ಪ್ರಕರಣಗಳು ಏಕಾಏಕಿ ಇಳಿಕೆಯಾಗಿವೆ.

41383 New Coronavirus Cases Reported In India On July 22

ಹೊಸ ಸೋಂಕಿನ ಪ್ರಕರಣಗಳೊಂದಿಗೆ ಚೇತರಿಕೆ ಪ್ರಮಾಣವೂ ಉತ್ತಮವಾಗಿದೆ. ಒಂದು ದಿನದಲ್ಲಿ 38,652 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಗುರುವಾರದ ಅಂಕಿಸಂಖ್ಯೆ ಮೂಲಕ ಇದುವರೆಗೂ ದೇಶದಲ್ಲಿ ಒಟ್ಟು 3,12,57,720 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 3,04,29,339 ಮಂದಿ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 4,09,394 ಆಗಿದೆ. ಇದುವರೆಗೂ ಸೋಂಕಿನಿಂದ 4,18,987 ಮಂದಿ ಸಾವನ್ನಪ್ಪಿದ್ದಾರೆ.

ಜುಲೈ 21ರವರೆಗೂ 45,09,11,712 ಮಾದರಿಗಳ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಬುಧವಾರ 17,18,439 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಇದುವರೆಗೂ 41,78,51,151 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಕೊವಿಡ್-19 ಲಸಿಕೆ ಪಡೆದ ನಂತರದಲ್ಲಿ ಹೊಸ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿರುವುದೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+