ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾವೈರಸ್ ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆಯೂ ಹೆಚ್ಚು!

|
Google Oneindia Kannada News

ನವದೆಹಲಿ, ಜುಲೈ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಜುಲೈ 4ರಿಂದಲೇ ಶುರುವಾಗಿದೆ ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಭಾರತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 40,000 ಗಡಿ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ41,806 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 581 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 39,130 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಸೃಷ್ಟಿಗೆ ಅಸಲಿ ಕಾರಣ ಯಾರು?ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಸೃಷ್ಟಿಗೆ ಅಸಲಿ ಕಾರಣ ಯಾರು?

ಭಾರತದಲ್ಲಿ ಒಟ್ಟು 3,09,87,880 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 3,01,43,850 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 4,11,989 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,32,041 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆ ಹೆಚ್ಚಾದಂತೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮಂಗಳವಾರ 19,15,501 ಜನರ ಮಾದರಿ ತಪಾಸಣೆಗೆ ಒಳಪಡಿಸಿದಾಗ 38,792 ಜನರಿಗೆ ಸೋಂಕು ದೃಢಪಟ್ಟಿತ್ತು. ಅದೇ ರೀತಿ ಕಳೆದ 24 ಗಂಟೆಗಳಲ್ಲಿ 19,43,488 ಜನರ ಮಾದರಿ ಪರೀಕ್ಷೆಗೊಳಪಡಿಸಿದಾಗ 41,806 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಲ್ಲಿ ಈವರೆಗೂ 43,59,73,639 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ

ಲಸಿಕೆ ಪಡೆದ ಫಲಾನುಭವಿಗಳ ಸಂಖ್ಯೆ ಎಷ್ಟಿದೆ?

ಲಸಿಕೆ ಪಡೆದ ಫಲಾನುಭವಿಗಳ ಸಂಖ್ಯೆ ಎಷ್ಟಿದೆ?

ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 180 ದಿನಗಳೇ ಕಳೆದಿವೆ. ದೇಶದಲ್ಲಿ ಈವರೆಗೂ 39 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 34,97,058 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 39,13,40,491 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಅನುಮೋದನೆ ಪಡೆದ ಲಸಿಕೆ

ಭಾರತದಲ್ಲಿ ಅನುಮೋದನೆ ಪಡೆದ ಲಸಿಕೆ

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.

English summary
41806 Coronavirus Infected Cases Found in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X