ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಭೀತಿ: ಒಂದೇ ದಿನ 41,965 ಮಂದಿಗೆ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಸಪ್ಟೆಂಬರ್ 1: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮತ್ತೆ ಹೆಚ್ಚಾಗುವ ಭೀತಿ ಸೃಷ್ಟಿಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 40,000ಕ್ಕೂ ಅಧಿಕ ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವರದಿಯಾಗಿದೆ.

ದೇಶದಲ್ಲಿ ಒಂದೇ ದಿನ 41,965 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 33,964 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 460 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 4,39,020ಕ್ಕೆ ಏರಿಕೆಯಾಗಿದೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,28,10,845ಕ್ಕೆ ಏರಿಕೆಯಾಗಿದೆ. ಇದುವರೆಗೂ 3,19,93,644 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 3,78,181 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶಾಲೆಗಳನ್ನು ತೆರೆಯುತ್ತಿದ್ದಂತೆ ಕೆಲವು ರಾಜ್ಯಗಳಲ್ಲಿ ಮಕ್ಕಳಲ್ಲಿ ಕೋವಿಡ್‌ ಪ್ರಕರಣ ಏರಿಕೆಶಾಲೆಗಳನ್ನು ತೆರೆಯುತ್ತಿದ್ದಂತೆ ಕೆಲವು ರಾಜ್ಯಗಳಲ್ಲಿ ಮಕ್ಕಳಲ್ಲಿ ಕೋವಿಡ್‌ ಪ್ರಕರಣ ಏರಿಕೆ

ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಅತಿಹೆಚ್ಚು ಹೊಸ ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ವರದಿಯಾಗಿವೆ. ದೇಶದಲ್ಲಿನ ಒಟ್ಟು 41,965 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ ಕೇರಳದಲ್ಲಿ 30,203 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ

ದೇಶದಲ್ಲಿ ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 16,06,785 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 52,31,84,293 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

65 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

65 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 228 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ 65 ಕೋಟಿಗೂ ಅಧಿಕ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 1,33,18,718 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 65,41,13,508 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೆ 64,36,13,160 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 1ರ ಅಂಕಿ-ಅಂಶಗಳ ಪ್ರಕಾರ, 64,36,13,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 64,36,13,160

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 14,94,040

* ಕೊವಿಡ್-19 ಲಸಿಕೆಯ ಲಭ್ಯತೆ - 5,42,30,546

English summary
41965 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X