ಭಾರತದಲ್ಲಿ 42,766 ಕೊರೊನಾ ಸೋಂಕಿತರು ಪತ್ತೆ, 1,206 ಮಂದಿ ಸಾವು

ನವದೆಹಲಿ, ಜುಲೈ 10: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,766 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನದಲ್ಲಿ 1206 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ 4,07,145 ಮಂದಿ ಮೃತಪಟ್ಟಿದ್ದಾರೆ. ಒಟ್ಟು 3,07,95,716 ಪ್ರಕರಣಗಳಿವೆ. 2,99,33,538 ಮಂದಿ ಇದುವರೆಗೆ ಚೇತರಿಸಿಕೊಂಡಿದ್ದಾರೆ, ಕಳೆದ 24 ಗಂಟೆಯಲ್ಲಿ 45,254 ಮಂದಿ ಗುಣಮುಖರಾಗಿದ್ದಾರೆ. 4,55,033 ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ಗುರುವಾರ ರಾತ್ರಿ 7 ಗಂಟೆ ವೇಳೆಗೆ 27,86,028 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 37,19,25,602 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

42,766 New Coronavirus cases reported in india in last 24 hours

18 ರಿಂದ 44 ವಯೋಮಾನದ 13,28,636 ಜನರಿಗೆ ಮೊದಲ ಡೋಸ್ ಹಾಗೂ 1,24,570 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 10,98,62,585 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 35,08,932 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+