ದೇಶದಲ್ಲಿ ಕೊಂಚ ಏರಿದ ಕೊರೊನಾ; 42,015 ಹೊಸ ಪ್ರಕರಣ ದಾಖಲು

ನವದೆಹಲಿ, ಜುಲೈ 21: ದೇಶದಲ್ಲಿ ಬುಧವಾರ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಕೊಂಚ ಏರಿಕೆ ದಾಖಲಾಗಿದೆ. ಮಂಗಳವಾರ, ಬರೋಬ್ಬರಿ 125 ದಿನಗಳ ನಂತರ ಮೊದಲ ಬಾರಿಗೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 30,000ಕ್ಕೆ ಇಳಿಕೆಯಾಗಿತ್ತು. ಒಟ್ಟಾರೆ 30,093 ಮಂದಿಗೆ ಸೋಂಕು ತಗುಲಿತ್ತು. ಇದೀಗ ಒಂದು ದಿನದ ಅಂತರದಲ್ಲಿ ಮತ್ತೆ ಹನ್ನೆರಡು ಸಾವಿರ ಪ್ರಕರಣಗಳು ಏರಿಕೆಯಾಗಿವೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,015 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ ದೇಶಾದ್ಯಂತ 3,998 ಮಂದಿ ಸಾವನ್ನಪ್ಪಿದ್ದಾರೆ.

42015 New Coronavirus Cases Reported In India On July 21

ಒಟ್ಟಾರೆ ದಾಖಲಿತ ಕೊರೊನಾ ಪ್ರಕರಣಗಳಿಗೆ ಹೋಲಿಸಿದರೆ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 36,977 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಬುಧವಾರದ ಈ ಅಂಕಿ ಸಂಖ್ಯೆ ಮೂಲಕ ಇದುವರೆಗೂ ಒಟ್ಟು 3,12,16,337 ಕೊರೊನಾ ಪ್ರಕರಣಗಳು ದಾಖಲಾದಂತಾಗಿದೆ. ಇದರಲ್ಲಿ 3,03,90,687 ಮಂದಿ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 4,07,170 ಆಗಿದೆ. ಇದುವರೆಗೂ ಸೋಂಕಿನಿಂದ 4,18,480 ಮಂದಿ ಸಾವನ್ನಪ್ಪಿದ್ದಾರೆ.

ಕೊರೊನಾ ಮೂರನೇ ಅಲೆ ಕುರಿತು ಈಚೆಗೆ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಮಾಹಿತಿ ನೀಡಿದ್ದು, "ಕೊರೊನಾ ಮೂರನೇ ಅಲೆಗೆ ಮುಂದಿನ 100-125 ದಿನಗಳು ಅತಿ ನಿರ್ಣಾಯಕ" ಎಂದಿದ್ದರು. ಈ ನಡುವೆ ಸೋಂಕಿನ ಪ್ರಕರಣಗಳ ಹೆಚ್ಚಳ ಕಂಡುಬಂದಿದೆ.

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಇದುವರೆಗೂ 41,54,72,455 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಕೊವಿಡ್-19 ಲಸಿಕೆ ಪಡೆದ ನಂತರದಲ್ಲಿ ಹೊಸ ಸೋಂಕಿತ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿರುವುದೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

      ಲೇಪಾಕ್ಷಿ ದೇವಾಲಯದ ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+