ಭಾರತದಲ್ಲಿ ಒಂದೇ ದಿನ 42618 ಮಂದಿಯಲ್ಲಿ ಕೊರೊನಾವೈರಸ್ ಪತ್ತೆ!

ನವದೆಹಲಿ, ಸಪ್ಟೆಂಬರ್ 4: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ದೇಶದಲ್ಲಿ ಪ್ರತಿನಿತ್ಯ ಹೊಸ ಪ್ರಕರಣಗಳ ಸಂಖ್ಯೆ 40,000 ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 42618 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಒಂದು ದಿನದಲ್ಲಿ 36,385 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 330 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,29,45,907ಕ್ಕೆ ಏರಿಕೆಯಾಗಿದೆ. ಇದುವರೆಗೂ 3,21,00,001 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 4,05,681 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈ ನಡುವೆ ಕೇರಳ ರಾಜ್ಯವೊಂದರಲ್ಲೇ 29,322 ಹೊಸ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ.

 42618 New Coronavirus Cases Reported in India in the Last 24 Hours

ಭಾರತದಲ್ಲಿ ಕೊವಿಡ್-19 ಪರೀಕ್ಷೆ ಪ್ರಮಾಣ ಎಷ್ಟಿದೆ?

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆ ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 17,04,970 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 52,82,40,038 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

67 ಕೋಟಿ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 67 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 231 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 58,85,687 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 34,81,898 ಮಂದಿಗೆ ಮೊದಲ ಡೋಸ್ ಹಾಗೂ 17,06,996 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಈವರೆಗೂ 67,65,00,301 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 65,00,99,080 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಎಷ್ಟು ಜನರಿಗೆ ಕೊವಿಡ್-19 ಲಸಿಕೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,60,234 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 84,47,084 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,28,369 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,34,51,798 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 51,92,87,304 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,72,12,997 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸೆಪ್ಟೆಂಬರ್ 4ರ ಅಂಕಿ-ಅಂಶಗಳ ಪ್ರಕಾರ, 65,00,99,080 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 65,00,99,080

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,20,95,700

* ಕೊವಿಡ್-19 ಲಸಿಕೆಯ ಲಭ್ಯತೆ - 4,36,81,760

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+