ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಜಗಜಾಂತರ ಅಂತರ: ಭಾರತದಲ್ಲಿ ಒಂದೇ ದಿನ 42,625 ಮಂದಿಗೆ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಆಗಸ್ಟ್ 4: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಗಳ ಆಟ ಶುರುವಾಗಿದೆ. ಆಗಸ್ಟ್ ಎರಡನೇ ವಾರದಲ್ಲಿ ಮೂರನೇ ಅಲೆ ಶುರುವಾಗುವುದು ಎಂದು ಕೆಲವು ತಜ್ಞರು ಹೇಳುತ್ತಿದ್ದರೆ, ಇನ್ನು ಕೆಲವರು ಎರಡನೇ ಅಲೆಯೇ ಇನ್ನೂ ಮುಕ್ತಾಯವಾಗಿಲ್ಲ ಎನ್ನುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಪ್ರತಿನಿತ್ಯ ಕೊವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಳಿತ ಕಂಡು ಬರುತ್ತಿದೆ.

ದೇಶದಲ್ಲಿ ಒಂದೇ ದಿನ 42,625 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 36,668 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 562 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಡೆಲ್ಟಾ ಪ್ಲಸ್ ವೈರಸ್ ವಿರುದ್ಧ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಐಸಿಎಂಆರ್ ಡೆಲ್ಟಾ ಪ್ಲಸ್ ವೈರಸ್ ವಿರುದ್ಧ ಕೊವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿ: ಐಸಿಎಂಆರ್

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,17,69,132ಕ್ಕೆ ಏರಿಕೆಯಾಗಿದೆ. ಈವರೆಗೂ 3,09,33,022 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,25,757 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,10,353 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 12,076 ಸೋಂಕಿತ ಪ್ರಕರಣ ಏರಿಕೆ

ಒಂದೇ ದಿನದಲ್ಲಿ 12,076 ಸೋಂಕಿತ ಪ್ರಕರಣ ಏರಿಕೆ

ದೇಶದಲ್ಲಿ ಒಂದೇ ದಿನ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಬರೋಬ್ಬರಿ 10,000 ಅಂತರ ಕಂಡು ಬಂದಿದೆ. ಮಂಗಳವಾರವಷ್ಟೇ 24 ಗಂಟೆಗಳಲ್ಲಿ 30549 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಇದೇ ಅವಧಿಯಲ್ಲಿ 38,887 ಸೋಂಕಿತರು ಗುಣಮುಖರಾಗಿದ್ದರೆ, 422 ಜನರು ಮಹಾಮಾರಿಗೆ ಬಲಿಯಾಗಿದ್ದರು. ಅದಾಗಿ ಒಂದು ದಿನದಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ 12,076ರ ಅಂತರ ಕಂಡು ಬಂದಿದೆ. ಅದೇ 24 ಗಂಟೆಯಲ್ಲಿ 140 ಮಂದಿ ಹೆಚ್ಚಾಗಿ ಮಹಾಮಾರಿಗೆ ಬಲಿಯಾಗಿರುವುದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.

ಕೊವಿಡ್-19 ಸೋಂಕು ತಪಾಸಣೆ ಅಂಕಿ-ಸಂಖ್ಯೆ

ಕೊವಿಡ್-19 ಸೋಂಕು ತಪಾಸಣೆ ಅಂಕಿ-ಸಂಖ್ಯೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಪರೀಕ್ಷೆ ಪ್ರಮಾಣ ಹೆಚ್ಚಿಸಿರುವುದೂ ಕೂಡ ಒಂದು ಕಾರಣವಾಗಿದೆ. ಮಂಗಳವಾರ 16,49,295 ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 18,47,518 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 47,31,42,307 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಮಂಗಳವಾರ ಒಂದೇ ದಿನ 18 ರಿಂದ 44 ವಯೋಮಾನದ 29,43,889 ಜನರಿಗೆ ಮೊದಲ ಡೋಸ್ ಹಾಗೂ 3,87,076 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,34,85,422 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 98,23,204 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಭಾರತದಲ್ಲಿ ಈವರೆಗೂ 48,52,86,570 ಮಂದಿಗೆ ಲಸಿಕೆ

ಭಾರತದಲ್ಲಿ ಈವರೆಗೂ 48,52,86,570 ಮಂದಿಗೆ ಲಸಿಕೆ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 200 ದಿನಗಳಲ್ಲಿ 48 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 62,53,741 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 48,52,86,570 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

2021ರ ಆಗಸ್ಟ್ 04ರ ಅಂಕಿ-ಅಂಶಗಳ ಪ್ರಕಾರ, 50,37,22,630 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 50,37,22,630

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 49,19,780

* ಬಳಕೆ ಆಗಿರುವ ಲಸಿಕೆ ಪ್ರಮಾಣ - 48,19,75,798

* ಕೊವಿಡ್-19 ಲಸಿಕೆಯ ಲಭ್ಯತೆ - 2,60,17,573

English summary
42625 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X