ಶಾಕಿಂಗ್: ಭಾರತದಲ್ಲಿ ಒಂದೇ ದಿನ 42982 ಮಂದಿಗೆ ಕೊರೊನಾವೈರಸ್!

ನವದೆಹಲಿ, ಆಗಸ್ಟ್ 5: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮೊದಲಿನಂತೆ ಮತ್ತೆ 40,000ದ ಗಡಿ ದಾಟುತ್ತಿದೆ. ದೇಶದಲ್ಲಿ ಒಂದೇ ದಿನ 42,982 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 41,726 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 533 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 4,26,290ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,18,12,114ಕ್ಕೆ ಏರಿಕೆಯಾಗಿದೆ. ಈವರೆಗೂ 3,09,74,748 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 4,11,076 ಸಕ್ರಿಯ ಪ್ರಕರಣಗಳಿವೆ.

42982 New Coronavirus Cases Reported in India in the Last 24 Hours

ಕೊವಿಡ್-19 ಸೋಂಕು ತಪಾಸಣೆ ಅಂಕಿ-ಸಂಖ್ಯೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಮಾತ್ರ ಸ್ಥಿರತೆ ಕಂಡು ಬಂದಿದೆ. ಬುಧವಾರ 18,47,518 ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 16,64,030 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 47,48,93,363 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಭಾರತದಲ್ಲಿ 4 ಹಂತಗಳ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

42982 New Coronavirus Cases Reported in India in the Last 24 Hours

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಮಂಗಳವಾರ ಒಂದೇ ದಿನ 18 ರಿಂದ 44 ವಯೋಮಾನದ 18,36,439 ಜನರಿಗೆ ಮೊದಲ ಡೋಸ್ ಹಾಗೂ 3,89,589 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,61,98,236 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ1,02,51,772 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

48.93 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 201 ದಿನಗಳಲ್ಲಿ 48.98 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 33,50,612 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 48,93,42,295 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

2021ರ ಆಗಸ್ಟ್ 05ರ ಅಂಕಿ-ಅಂಶಗಳ ಪ್ರಕಾರ, 51,01,88,510 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 51,01,88,510

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 7,53,620

* ಬಳಕೆ ಆಗಿರುವ ಲಸಿಕೆ ಪ್ರಮಾಣ - 48,60,15,232

* ಕೊವಿಡ್-19 ಲಸಿಕೆಯ ಲಭ್ಯತೆ - 2,69,06,624

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+