ಭಾರತದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಏರಿಕೆ

ನವದೆಹಲಿ, ಜುಲೈ 07: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 43,733 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಮಂಗಳವಾರ 34,703 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಕಳೆದ ಒಂದು ದಿನದಲ್ಲಿ ಸುಮಾರು 10 ಸಾವಿರದಷ್ಟು ಪ್ರಕರಣಗಳ ಏರಿಕೆಯಾಗಿದೆ.
4,59,920 ಸಕ್ರಿಯ ಪ್ರಕರಣಗಳಿವೆ, ಚೇತರಿಕೆ ಪ್ರಮಾಣ ಶೇ.97.18ರಷ್ಟಿದೆ.

ಇದುವರೆಗೆ ಒಟ್ಟು 42,33,32,097 ಮಾದರಿಗಳನ್ನು ಪರೀಕ್ಷಿಸಲಾಗಿದೆ, ಜುಲೈ 6 ರಂದು 19,07,216 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

43,733 New Coronavirus cases reported in india in last 24 hours

ಒಟ್ಟು 3,06,63,665 ಪ್ರಕರಣಗಳಿವೆ, ಒಂದೇ ದಿನದಲ್ಲಿ 930 ಮಂದಿ ಮೃತಪಟ್ಟಿದ್ದಾರೆ, ಇದುವರೆಗೆ 4,04,211 ಸಾವನ್ನಪ್ಪಿದ್ದಾರೆ, ಕಳೆದ 24 ಗಂಟೆಯಲ್ಲಿ 47,240 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ, ಇಲ್ಲಿಯವರೆಗೆ 2,97,99,534 ಮಂದಿ ಗುಣಮುಖರಾಗಿದ್ದಾರೆ. 36,13,23,548 ಮಂದಿಗೆ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 32,40,007 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. 18 ರಿಂದ 44 ವಯೋಮಾನದ 16,00,825 ಜನರಿಗೆ ಮೊದಲ ಡೋಸ್ ಹಾಗೂ 1,09,913 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ 10,45,24,240 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 30,42,302 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 172 ದಿನಗಳಲ್ಲಿ 36 ಕೋಟಿಗಿಂತಲೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 36,09,56,621 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+