ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಮತ್ತೆ 4 ಲಕ್ಷ ದಾಟಿದ ಕೊರೊನಾ ಸಕ್ರಿಯ ಪ್ರಕರಣ

|
Google Oneindia Kannada News

ನವದೆಹಲಿ, ಜುಲೈ 29: ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಇದೇ ಅವಧಿಯಲ್ಲಿ 38,465 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದ ಅವಧಿಯಲ್ಲಿ ಸೋಂಕಿನಿಂದ 640 ಮಂದಿ ಸಾವನ್ನಪ್ಪಿದ್ದಾರೆ.

ಗುರುವಾರದ ಈ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 31,528,114 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಸದ್ಯ 4,03,840 ಪ್ರಕರಣಗಳಿವೆ.

43509 New Coronavirus Cases Reported In India On July 29

ಇಲ್ಲಿಯವರೆಗೆ ಸೋಂಕಿನಿಂದ 4,22,662 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿನ ಗುಣಮುಖ ಪ್ರಮಾಣ ಶೇ 97.38 ಆಗಿದೆ.

ದೇಶದಲ್ಲಿ ಜುಲೈ 28ರಂದು 17,28,795 ಮಾದರಿಗಳ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೂ 46,26,29,773 ಮಾದರಿಗಳ ಪರೀಕ್ಷೆ ನಡೆಸಲಾಗಿದೆ.

ಕೊರೊನಾ ಸೂಕ್ತ ನಿರ್ವಹಣೆಗೆ ರಾಜ್ಯ ಮಟ್ಟದ ಸೆರೊ ಸಮೀಕ್ಷೆ ನಡೆಸಲು ಸಲಹೆ ನೀಡಿದ ಕೇಂದ್ರಕೊರೊನಾ ಸೂಕ್ತ ನಿರ್ವಹಣೆಗೆ ರಾಜ್ಯ ಮಟ್ಟದ ಸೆರೊ ಸಮೀಕ್ಷೆ ನಡೆಸಲು ಸಲಹೆ ನೀಡಿದ ಕೇಂದ್ರ

ಇದರೊಂದಿಗೆ, ಕೊರೊನಾ ಮೂರನೇ ಅಲೆ ಕುರಿತ ತಜ್ಞರ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿಗೆ ತಕ್ಕಂತೆ ಕ್ರಮಗಳನ್ನು ಅಳವಡಿಸಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ರಾಜ್ಯ ಕೇಂದ್ರಿತ ಸೆರೋ ಸರ್ವೇಗಳನ್ನು ನಡೆಸಲು ಕೇಂದ್ರ ಸರ್ಕಾರ ಬುಧವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

ಈ ಸಂಬಂಧ ಕೇಂದ್ರ ಆರೋಗ್ಯ ಕಾರ್ಯದರ್ಶಿ ಎಲ್ಲಾ ರಾಜ್ಯಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

English summary
43,509 new coronavirus cases reported in india on July 29. 38,465 people recovered
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X