ದೇಶದಲ್ಲಿ ಹೊಸದಾಗಿ ದಾಖಲಾದ ಕೊರೊನಾ ಪ್ರಕರಣಗಳಲ್ಲಿ ಮತ್ತೆ ಏರಿಕೆ

ನವದೆಹಲಿ, ಜುಲೈ 28: ದೇಶದಲ್ಲಿ ಬರೋಬ್ಬರಿ 132 ದಿನಗಳ ನಂತರ ಮಂಗಳವಾರ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿತ್ತು. ಇದೀಗ ಒಂದೇ ದಿನದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಕಳೆದ 24 ಗಂಟೆಗಳಲ್ಲಿ 43,654 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 41,678 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿಯೂ ಏರಿಕೆ ಕಂಡುಬಂದಿದ್ದು, ಒಂದು ದಿನದ ಅವಧಿಯಲ್ಲಿ 640 ಮಂದಿ ಸಾವನ್ನಪ್ಪಿದ್ದಾರೆ.

43654 New Coronavirus Cases Reported In India On July 28

ಬುಧವಾರದ ಈ ಅಂಕಿಸಂಖ್ಯೆ ಪ್ರಕಾರ, ಇದುವರೆಗೂ ದೇಶದಲ್ಲಿ ಒಟ್ಟು 3,06,63,147 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 3,99,436 ಆಗಿದೆ. ಇಲ್ಲಿಯವರೆಗೆ ಸೋಂಕಿನಿಂದ 4,22,022 ಮಂದಿ ಸಾವನ್ನಪ್ಪಿದ್ದಾರೆ.

ಮಂಗಳವಾರ 29,689 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದವು, ಒಂದೇ ದಿನದ ಅಂತರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಈ ನಡುವೆ ಕೊರೊನಾ ಸೋಂಕಿನ ಕುರಿತು ಮಂಗಳವಾರ ಕೇಂದ್ರ ಎಚ್ಚರಿಕೆ ನೀಡಿದೆ. "ನಾವು ಆಯಾಸಗೊಳ್ಳಬಹುದು ಆದರೆ ಕೊರೊನಾ ವೈರಸ್ ಅಲ್ಲ. ಹೀಗಾಗಿ ಮುಂಬರುವ ಹಬ್ಬಗಳಿಗೂ ಮುಂಚಿತವಾಗಿ ಎಲ್ಲರಿಗೂ ಕೊರೊನಾ ಲಸಿಕೆ ಹಾಕಿಸುವ ಅಗತ್ಯವಿದೆ" ಎಂದು ಹೇಳಿದೆ.

ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ತುಂಬಾ ಎಚ್ಚರಿಕೆವಹಿಸಬೇಕಾಗುತ್ತದೆ. ಅನಗತ್ಯವಾದ ಓಡಾಟಕ್ಕೆ ಕಡಿವಾಣ ಹಾಕಬೇಕಿದೆ ಎಂದು ಹೇಳಿದೆ.

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಇದುವರೆಗೂ 44,61,56,659 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+