ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ: ಕಳೆದ 24 ಗಂಟೆಗಳಲ್ಲಿ 43893 ಜನರಿಗೆ ಕೊರೊನಾವೈರಸ್

|
Google Oneindia Kannada News

ನವದೆಹಲಿ, ಅಕ್ಟೋಬರ್.28: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 58,439 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 508 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ ಸಿಹಿಸುದ್ದಿ: ಭಾರತದಲ್ಲಿ ಇಳಿಮುಖವಾದ ಕೊರೊನಾವೈರಸ್ ಪ್ರಕರಣ

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ79,90,322ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,20,010 ಮಂದಿ ಪ್ರಾಣ ಬಿಟ್ಟಿದ್ದಾರೆ. 72,59,509 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 6,10,803 ಸಕ್ರಿಯ ಪ್ರಕರಣಗಳಿವೆ.

43893 New Covid-19 Cases And 508 Deaths Reported In India In The Last 24 Hours


10,66,786 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,66,786 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 10,54,87,680 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 44236911ರ ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 11,71,337ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 32444172 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

English summary
43893 New Covid-19 Cases And 508 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X