ಭಾರತದಲ್ಲಿ 91 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಪ್ರಕರಣ
ನವದೆಹಲಿ, ನವೆಂಬರ್.23: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 91 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಒಂದೇ ದಿನ 44059 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 41024 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 511 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 91,39,866ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,33,738 ಮಂದಿ ಪ್ರಾಣ ಬಿಟ್ಟಿದ್ದಾರೆ. 85,62,642 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 4,43,486 ಸಕ್ರಿಯ ಪ್ರಕರಣಗಳಿವೆ.

8,49,596 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 8,49,596 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 13,25,82,730 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ವಿಶ್ವದಲ್ಲಿ 58970525 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 1393227 ಜನರು ಪ್ರಾಣ ಬಿಟ್ಟಿದ್ದಾರೆ. ಕೊಂಚ ಸಮಾಧಾನದ ವಿಚಾರ ಎಂದರೆ 40759532 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ ಅಮೆರಿಕಾ ಅಗ್ರಸ್ಥಾನದಲ್ಲಿದ್ದರೆ, ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರ ಭಾರತವು ಇದರಲ್ಲೂ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.












Click it and Unblock the Notifications