ಕೊರೊನಾ ಸೋಂಕು; ಕಳೆದ 24 ಗಂಟೆಗಳಲ್ಲಿ 44,111 ಪ್ರಕರಣ ದಾಖಲು
ನವದೆಹಲಿ, ಜುಲೈ 03: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,111 ಹೊಸ ಕೊರೊನಾ ಪ್ರಕರಣ ದಾಖಲಾಗಿವೆ. ಇದರೊಂದಿಗೆ ಚೇತರಿಕೆ ಪ್ರಮಾಣದಲ್ಲಿಯೂ ಏರಿಕೆ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ 57,477 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಂದು ದಿನದ ಅವಧಿಯಲ್ಲಿ 738 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶನಿವಾರದ ಅಂಕಿಅಂಶದ ಪ್ರಕಾರ, ದೇಶದಲ್ಲಿ ಒಟ್ಟು 3,05,02,362 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 2,96,05,779 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 4,01,050 ಮಂದಿ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ದೇಶದಲ್ಲಿ 4,95,533 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜುಲೈ 02ರವರೆಗೂ ದೇಶದಲ್ಲಿ ಒಟ್ಟು 34,46,11,291 ಮಂದಿಗೆ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಜನವರಿ 16ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 34,46,11,291 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.












Click it and Unblock the Notifications