ಭಾರತದಲ್ಲಿ ಒಂದೇ ದಿನ 44376 ಮಂದಿಗೆ ಕೊವಿಡ್-19 ಸೋಂಕು
ನವದೆಹಲಿ, ನವೆಂಬರ್.25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 92 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಒಂದೇ ದಿನ 44376 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 37,816 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 481 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 92,22,217ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,34,699 ಮಂದಿ ಪ್ರಾಣ ಬಿಟ್ಟಿದ್ದಾರೆ. 86,42,771 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 4,44,746 ಸಕ್ರಿಯ ಪ್ರಕರಣಗಳಿವೆ.

ಜಗತ್ತಿನಲ್ಲಿ ಕೊವಿಡ್-19 ಅಂಕಿ-ಸಂಖ್ಯೆ:
ವಿಶ್ವದಲ್ಲಿ 6,00,86,074 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಈವರೆಗೂ 14,13,775 ಜನರು ಪ್ರಾಣ ಬಿಟ್ಟಿದ್ದಾರೆ. ಜಗತ್ತಿನಲ್ಲಿ ಈವರೆಗೂ 4,15,33,235 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಅತಿಹೆಚ್ಚು ಕೊರೊನಾವೈರಸ್ ಸೋಂಕಿತರು ಮತ್ತು ಸಾವಿನ ಸಂಖ್ಯೆಯು ಹೆಚ್ಚಾಗಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಮೆರಿಕಾ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.












Click it and Unblock the Notifications