ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ

|
Google Oneindia Kannada News

ನವದೆಹಲಿ, ನವೆಂಬರ್ 26: ದೇಶದಲ್ಲಿ ಸತತ ಎರಡು ವಾರದಿಂದ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಳವಳ ಮೂಡಿಸಿದೆ. ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಆಸುಪಾಸಿನಲ್ಲಿರುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 44,489 ಹೊಸ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 92,66,706ಕ್ಕೆ ತಲುಪಿದೆ. ಹಾಗೆಯೇ 24 ಗಂಟೆಗಳಲ್ಲಿ 524 ಮಂದಿ ಸಾವುಗಳು ವರದಿಯಾಗಿವೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 1,35,223ಕ್ಕೆ ಏರಿಕೆಯಾಗಿದೆ.

ಅಮೆರಿಕದಲ್ಲಿ ಕೋವಿಡ್‌ಗೆ ಒಂದೇ ದಿನ 2302 ಮಂದಿ ಬಲಿಅಮೆರಿಕದಲ್ಲಿ ಕೋವಿಡ್‌ಗೆ ಒಂದೇ ದಿನ 2302 ಮಂದಿ ಬಲಿ

ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 4,52,344ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 36,367 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 86,79,138 ಮಂದಿ ಬಿಡುಗಡೆಯಾಗಿದ್ದಾರೆ.

44,489 Fresh Coronavirus Cases And 524 Deaths Reported

1,795,959 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಅತ್ಯಧಿಕ ಕೊರೊನಾ ವೈರಸ್ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಎರಡನೆಯ ಸ್ಥಾನದಲ್ಲಿದ್ದು, ರಾಜ್ಯದಲ್ಲಿ 878,055 ಪ್ರಕರಣಗಳು ವರದಿಯಾಗಿವೆ. ಆಂಧ್ರಪ್ರದೇಶದಲ್ಲಿ 864,000, ತಮಿಳುನಾಡಿನಲ್ಲಿ 774,710 ಪ್ರಕರಣಗಳು ಮತ್ತು ಕೇರಳದಲ್ಲಿ 571,000 ಪ್ರಕರಣಗಳು ವರದಿಯಾಗಿವೆ.

Recommended Video

Diego Maradona ಅಗಲಿಕೆಗೆ ಫುಟ್ಬಾಲ್ ಜಗತ್ತು ಮರುಕ | Oneindia Kannada

ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 60,719,957ಕ್ಕೆ ತಲುಪಿದೆ. ಇದುವರೆಗೂ ಜಗತ್ತಿನಲ್ಲಿ 1,426,823 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಒಟ್ಟು 42,031,393 ಮಂದಿ ಚೇತರಿಸಿಕೊಂಡಿದ್ದಾರೆ. 17,261,741 ಸಕ್ರಿಯ ಪ್ರಕರಣಗಳು ದಾಖಲಾಗಿವೆ.

English summary
44,489 fresh new coronavirus cases and 524 deaths were reported across India, total tally reaches to 9,266,705 with 4,52,344 active cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X