ಭಾರತದಲ್ಲಿ ತಪಾಸಣೆ ಕಡಿಮೆಯಾದರೂ ಕೊರೊನಾ ಪ್ರಕರಣ ಹೆಚ್ಚು!
ನವದೆಹಲಿ, ಆಗಸ್ಟ್ 6: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಗುರುವಾರ ಒಂದೇ ದಿನ 42,982 ಹೊಸ ಪ್ರಕರಣಗಳು ವರದಿಯಾಗಿದ್ದು, ಅದಾಗಿ 24 ಗಂಟೆಗಳಲ್ಲಿ 44643 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಕಳೆದ 24 ಗಂಟೆಗಳಲ್ಲಿ 41,096 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 464 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 4,26,756 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,18,56,757ಕ್ಕೆ ಏರಿಕೆಯಾಗಿದೆ. ಈವರೆಗೂ 3,10,15,844 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 4,14,159 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಪರೀಕ್ಷೆ ಕಡಿಮೆಯಾದರೂ ಪ್ರಕರಣ ಹೆಚ್ಚಳ
ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಗುರುವಾರ 16,64,030 ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 16,40,287 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 47,65,33,650 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ನಾಲ್ಕು ಹಂತಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಮಧ್ಯಮ ವಯಸ್ಕರಿಗೆ ಲಸಿಕೆ ವಿತರಣೆಯಲ್ಲಿ ಮೊದಲ ಆದ್ಯತೆ
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಮಂಗಳವಾರ ಒಂದೇ ದಿನ 18 ರಿಂದ 44 ವಯೋಮಾನದ 27,26,494 ಜನರಿಗೆ ಮೊದಲ ಡೋಸ್ ಹಾಗೂ 4,81,823 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,92,68,754 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 1,07,72,537 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

49 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 202 ದಿನಗಳಲ್ಲಿ 49 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 50,29,573 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 49,53,27,595 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪೂರೈಕೆ ಮತ್ತು ಲಭ್ಯತೆಯ ಮಾಹಿತಿ
2021ರ ಆಗಸ್ಟ್ 06ರ ಅಂಕಿ-ಅಂಶಗಳ ಪ್ರಕಾರ, 51,16,46,830 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 51,16,46,830
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 20,49,220
* ಬಳಕೆ ಆಗಿರುವ ಲಸಿಕೆ ಪ್ರಮಾಣ - 49,19,73,961
* ಕೊವಿಡ್-19 ಲಸಿಕೆಯ ಲಭ್ಯತೆ - 2,30,03,211












Click it and Unblock the Notifications