ಭಾರತದಲ್ಲಿ ಹೊಸದಾಗಿ 45,892 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಜುಲೈ 08: ಭಾರತದಲ್ಲಿ ಆಗಸ್ಟ್ ತಿಂಗಳಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ಬರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.
ಕಳೆದ ಒಂದು ವಾರದ ಹಿಂದೆ ಗಣನೀಯವಾಗಿ ಇಳಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ.
ಕಳೆದ 24 ಗಂಟೆಗಳಲ್ಲಿ 45,892 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 817 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 4,05,028 ಮಂದಿ ಸಾವನ್ನಪ್ಪಿದ್ದಾರೆ.

3,07,09,557 ಒಟ್ಟು ಪ್ರಕರಣಗಳಿವೆ, 4,60,704 ಸಕ್ರಿಯ ಪ್ರಕರಣಗಳಿವೆ, ಒಂದೇ ದಿನದಲ್ಲಿ 44,291 ಮಂದಿ ಗುಣಮುಖರಾಗಿದ್ದಾರೆ, ಇಲ್ಲಿಯವರೆಗೆ 2,98,43,825 ಮಂದಿ ಚೇತರಿಕೆ ಕಂಡಿದ್ದರು. ಕಳೆದ 24 ಗಂಟೆಗಳಲ್ಲಿ 33,81,671 ಮಂದಿಗೆ ಲಸಿಕೆ ನೀಡಲಾಗಿದೆ. ಒಟ್ಟು ಇದುವರೆಗೆ 36,48,47,549 ಮಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,04,426 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 36,45,69,414 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
18 ರಿಂದ 44 ವಯೋಮಾನದ 14,04,816 ಜನರಿಗೆ ಮೊದಲ ಡೋಸ್ ಹಾಗೂ 1,35,166 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ 10,62,08,106 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ31,88,078 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ.












Click it and Unblock the Notifications