ಭಾರತದಲ್ಲಿ ಹೊಸದಾಗಿ 45,903 ಕೊರೊನಾ ಪ್ರಕರಣಗಳು ದೃಢ

ನವದೆಹಲಿ, ನವೆಂಬರ್ 09: ಭಾರತದಲ್ಲಿ ಹೊಸದಾಗಿ 45,903 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 490 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು 1,26,611 ಮಂದಿ ಸಾವನ್ನಪ್ಪಿದ್ದಾರೆ. 5,09,673 ಸಕ್ರಿಯ ಪ್ರಕರಣಗಳಿವೆ.

45,903 New Covid-19 Cases And 490 Deaths Reported In India In The Last 24 Hours

79,17,373 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿ 48,405 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.

ಭಾರತದಲ್ಲಿ ಭಾನುವಾರ 45,674 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 85,07,754ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕಳೆದ 24 ಗಂಟೆಗಳ ಕೋವಿಡ್ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

24 ಗಂಟೆಯಲ್ಲಿ 559 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 1,26,121.
ಕರ್ನಾಟಕದಲ್ಲಿ ಕೊರೊನಾ ಚೇತರಿಕೆ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 2,360 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು ಇಂದು 2,740 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 8,46,887ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 22 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,391ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಭಾನುವಾರ 2,360 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,01,799ಕ್ಕೆ ಏರಿಕೆಯಾಗಿದೆ. 33,678 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,579 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,49,327ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 11 ಮಂದಿ ಸಾವನ್ನಪ್ಪಿದ್ದಾರೆ.
ದೆಹಲಿಯಲ್ಲಿ 7745 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+